ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡುವಂತಿಲ್ಲ.!

ದಾವಣಗೆರೆ: ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಇನ್ನು ಮುಂದೆ ತಮ್ಮ ಅಥವಾ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆ ಮಾಡುವಂತಿಲ್ಲ ಎಂದು ಮಕ್ಕಳ ರಕ್ಷಣಾ ನಿರ್ದೇಶನಾಲ ಸುತ್ತೋಲೆ ಹೊರಡಿಸಿದೆ.

ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ರಾಜಕೀಯ ಮುಖಂಡರುಗಳು, ಮಠಾಧೀಶರು ತಮ್ಮ ಅಥವಾ ತಮ್ಮ ಮಕ್ಕಳ ಜನ್ಮ ದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುವುದನ್ನು ನಿಷೇಧಿಸಿ ಮಕ್ಕಳ ರಕ್ಷಣಾ ನಿರ್ದೇಶನಾಲ ಆದೇಶ ಹೊರಡಿಸಿದೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ, ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ, ತಂದೆ – ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಅಥವಾ ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ.

ಇಂತಹ ಸಂಸ್ಥೆಯಲ್ಲಿ ಅದ್ದೂರಿ ಕಾರ್ಯಕ್ರಮಗಳನ್ನು ಆಚರಿಸುವುದರಿಂದ ಅಲ್ಲಿನ ಮಕ್ಕಳಿಗೆ ಅವರ ಹುಟ್ಟುಹಬ್ಬ ಈ ರೀತಿ ಆಚರಿಸಿಕೊಳ್ಳಲು ಆಗಲಿಲ್ಲವೆಂದು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ, ಆದ್ದರಿಂದ ಅವರ ಭಾವನೆಯನ್ನು ಕಾಪಾಡುವ ಸಲುವಾಗಿ ಇಂತಹ ಅದ್ಧೂರಿ ಆಚರಣೆ ನಿಷೇಧಿಸಿರುವುದಾಗಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!