ಗೃಹಲಕ್ಷ್ಮಿಯೋಜನೆ: ಅತ್ತೆಗೇ ಮೊದಲ ಆದ್ಯತೆ
ಬೆಳಗಾವಿ: ‘ಗೃಹಲಕ್ಷ್ಮೀ’ ಯೋಜನೆ ಅಡಿ 2000 ನೆರವನ್ನು ಒಂದು ಮನೆಯಲ್ಲಿ ಅತ್ತೆಗೆ ಕೊಡಬೇಕೋ, ಸೊಸೆಗೆ ಕೊಡಬೇಕೋ ಎಂಬ ಬಗ್ಗೆ ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಮನೆಯಲ್ಲಿ ಹಿರಿಯರಾದ ಅತ್ತೆಗೆ ಪ್ರಾಧಾನ್ಯತೆ ಕೊಡಬೇಕಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ ಕುರಿತು ಸ್ಪಷ್ಟ ಪಡಿಸಿದ್ದಾರೆ. ನಮ್ಮ ಸಂಸ್ಕೃತಿಯಲ್ಲಿ ಅತ್ತೆಯೇ ಮನೆಯ ಯಜಮಾನಿ. ಹಾಗಾಗಿ, ಅತ್ತೆಗೆ ಈ ನೆರವು ಸಿಗಲಿದೆ ಎಂದವರು ಹೇಳಿದ್ದಾರೆ.
ಇದಕ್ಕೆ ಧ್ವನಿಗೂಡಿಸಿದ ಸಚಿವ ಸತೀಶ ಜಾರಕಿಹೊಳಿ, ‘ಸ್ವತಃ ಅತ್ತೆಯೇ ಮುಂದೆ ಬಂದು ಸೊಸೆಗೆ ನೆರವು ಕೊಡಲು ಬಯಸಿದರೆ ಮಾತ್ರ ಸೊಸೆಗೆ ಕೊಡುತ್ತೇವೆ’ ಎಂದು ಹೇಳಿದ್ದಾರೆ.