ಗೃಹ ಖಾತೆ ಪಡೆದ ಅರಗ ಜ್ಞಾನೇಂದ್ರ ಮೊದಲ ಮಾತು ಹೇಳಿದ್ದು ಹೀಗೆ👇

ಶಿವಮೊಗ್ಗ: ರಾಜ್ಯದ ಶಾಂತಿ, ಸುವ್ಯವಸ್ಥೆ ಕಾಪಾಡುವ ಮಹತ್ತರವಾದ ಜವಾಬ್ದಾರಿ ಇರುವ ಗೃಹ ಖಾತೆಯನ್ನು ನನಗೆ ನೀಡಿದ್ದು, ಸಮರ್ಥವಾಗಿ ನಿಭಾಯಿಸುವ ಎಲ್ಲಾ ಪ್ರಯತ್ನ ನಾನು ಮಾಡುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಇಂತಹದ್ದೇ ಖಾತೆ ಕೊಡಿ ಎಂದು ಮುಖ್ಯಮಂತ್ರಿಗಳಿಗೆ ಕೇಳಿರಲಿಲ್ಲ. ಯಾವುದೇ ಖಾತೆ ಕೊಟ್ಟರು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದಷ್ಟೇ ಹೇಳಿದ್ದೆ. ಅದರಂತೆ ಅವರು ನನಗೆ ಗೃಹ ಖಾತೆ ಕೊಟ್ಟಿರುವುದು ಸಂತಸ ತಂದಿದ್ದು, ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.