Gruha Lakshmi scheme; ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಅದ್ದೂರಿ ಚಾಲನೆ ನೀಡಿದ ಸಿದ್ದರಾಮಯ್ಯ
ಮೈಸೂರು, ಆ.30: ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು (Gruha Lakshmi scheme) ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .
ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಈವರೆಗೆ ಕೊಟ್ಟ ಮಾತಿನಂತೆ ಯಾವ ಸರ್ಕಾರವೂ ನಡೆದುಕೊಂಡಿಲ್ಲ ಎಂದರೆ ಅತಿಶಯೋಕ್ತಿಯಲ್ಲ. ನಮ್ಮ ಸರ್ಕಾರ ಮುಂದಿನ 5 ವರ್ಷಗಳಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ನೂರಕ್ಕೆ ನೂರು ಈಡೇರಿಸುವ ವಿಶ್ವಾಸ, ಭರವಸೆ ನಮಗಿದೆ. ಐದು ಗ್ಯಾರಂಟಿಗಳನ್ನು ನಾವು ಜನರ ಮುಂದಿಟ್ಟಿದ್ದೆವು. ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ನಾಲ್ಕನೇ ಗ್ಯಾರಂಟಿಯಾಗಿ ಗೃಹಲಕ್ಷ್ಮೀ ಯೋಜನೆಯನ್ನು ಇಂದು ಜಾರಿಮಾಡಲಾಗಿದೆ ಎಂದರು.
Education Department; ಶಿಕ್ಷಣ ಇಲಾಖೆ ನಿರ್ಲಕ್ಷ್ಯ; ಜಿಲ್ಲೆಯ ಗಡಿಭಾಗದ ಈ ಹಳ್ಳೀಲಿ ಕೊಠಡಿ, ಶೌಚಾಲಯವಿಲ್ಲ
100 ದಿನಗಳ ಸಾಧನೆ ಬಿಂಬಿಸುವ ಕಿರುಹೊತ್ತಿಗೆ
ಈ ತಿಂಗಳ 27 ನೇ ತಾರೀಖಿಗೆ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಜನತೆಯ ಮುಂದೆ ಸರ್ಕಾರದ ಸಾಧನೆಗಳನ್ನು ತಿಳಿಸಲು ಸಣ್ಣ ಕೈಪಿಡಿ ಹೊರತರಲಾಗಿದೆ. ಈ ಕಿರುಹೊತ್ತಿಗೆ ಕಳೆದ ಮೂರು ತಿಂಗಳು, 10 ದಿನಗಳಲ್ಲಿ ಮಾಡಿರುವ ಸಾಧನೆಗಳನ್ನು ಒಳಗೊಂಡಿದೆ. ಈ ರಾಜ್ಯದ ಜನತೆಗೆ ನಮ್ಮ ಕರ್ತವ್ಯ ಜವಾಬ್ದಾರಿ ಹಾಗೂ ಸಾಧನೆಗಳನ್ನು ಮುಂದಿಡುವ ಪ್ರಯತ್ನ ಮಾಡಿದೆ ಎಂದರು.
ಬೃಹತ್ ಪ್ರಮಾಣದಲ್ಲಿ ಬಡವರಿಗೆ ಹಣ ವರ್ಗಾವಣೆ
ಕರ್ನಾಟಕದಲ್ಲಿ 1.26 ಕೋಟಿ ಕುಟುಂಬಗಳಿವೆ. ಆ ಕುಟುಂಬಗಳ ಯಜಮಾನಿಯಾರಿಗೆ 2000 ರೂ.ಗಳನ್ನು ಅವರ ಖಾತೆಗೆ ಇಂದು ಜಮಾ ಮಾಡಲಾಗಿದೆ. ಈ ಯೋಜನೆಗೆ 1.10 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. ಇಡೀ ಭಾರತದಲ್ಲಿ ಯಾವ ರಾಜ್ಯವೂ ತೊಂದರೆಯಲ್ಲಿರುವ ಜನರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಂದರೆ ವರ್ಷಕ್ಕೆ 24 ಸಾವಿರ ಹಣವನ್ನು ಬಡವರಿಗೆ ವರ್ಗಾಯಿಸಿಲ್ಲ ಎನ್ನುವುದು ಕಟುಸತ್ಯ. ಜೂನ್ 11 ರಂದು ಶಕ್ತಿ ಯೋಜನೆ ಜಾರಿಯಾಗಿದ್ದು, 48,500 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜುಲೈ 10 ರಂದು ಜಾರಿಗೆ ತಂದೆವು. ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡದೇ ಹೋದರೂ ನಾವು 170 ರೂ.ಗಳನ್ನು ಅಕ್ಕಿ ಸಿಗುವವರೆಗೂ ಪ್ರತಿ ಬಿಪಿಎಲ್, ಅಂತ್ಯೋದಯ ಕಾರ್ಡುದಾರರ ಖಾತೆಗೆ ಜಮಾ ಮಾಡಿದ್ದೇವೆ ಎಂದರು.
Department of Excise; ಸಿಎಲ್-2 ವೈನ್ ಸ್ಟೋರ್ ಸುತ್ತಮುತ್ತ ಮದ್ಯಪಾನಕ್ಕೆ ಅವಕಾಶ: ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ
ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ
ಜುಲೈ ತಿಂಗಳಿಂದ ಗೃಹಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್ ವರೆಗೆ ವಿದ್ಯುತ್ ಬಳಸುವವರಿಗೆಲ್ಲಾ ಉಚಿತ ವಿದ್ಯುತ್ ಒದಗಿಸಿ ಶೂನ್ಯ ಬಿಲ್ ನೀಡುತ್ತಿದ್ದೇವೆ. ಈ ಯೋಜನೆಗೆ 1.56 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. ಪ್ರಧಾನಿಗಳೇ ಈ 5 ಗ್ಯಾರಂಟಿಗಳನ್ನು ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದೆ. ಯುವನಿಧಿಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಪ್ರಾರಂಭವಾಗಲಿದೆ. ಎಲ್ಲಾ ಅಭಿವೃದ್ದಿ ಕಾರ್ಯಕ್ರಮಗಳನ್ನು ಜಾರಿ ಮಾಡಿ, ನೀರಾವರಿ, ಲೋಕೋಪಯೋಗಿ, ವಸತಿ, ಗ್ರಾಮಿಣಾಭಿವೃದ್ಧಿಗೆ ಅನುದಾನವಿಟ್ಟು 5 ಗ್ಯಾರಂಟಿಗಳನ್ನು ಜಾರಿ ಮಾಡಿದೆ. 56 ಸಾವಿರ ಕೋಟಿ ರೂ.ಗಳು ಒಂದು ವರ್ಷಕ್ಕೆ ತಗಲುತ್ತದೆ. ನಮ್ಮದು ಬಡವರ , ದಲಿತರ, ಹಿಂದುಳಿದ, ಅಲ್ಪಸಂಖ್ಯಾತರ ರೈತರ, ಕಾರ್ಮಿಕರ, ಯುವಕರ ಪರವಾದ ಸರ್ಕಾರ ಎಂದು ಸಾಬೀತು ಮಾಡಲಾಗಿದೆ. ಯಾರು ಏನೇ ಹೇಳಿದರೂ ನಾನು ನುಡಿದಂತೆ ನಡೆದಿದ್ದೇವೆ. ವಿರೋಧ ಪಕ್ಷದವರು ಹೇಳಿರುವುದು ಸುಳ್ಳು ಎಂದರು. ರಾಜ್ಯದಲ್ಲಿ ಐತಿಹಾಸಿಕ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದರು.
ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ರಾಜ್ಯಸಭಾ ಸದಸ್ಯ ಹಾಗೂ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವ ಡಾ: ಕೆ.ಹೆಚ್.ಮುನಿಯಪ್ಪ, ಸಚಿವರಾದ ಕೃಷ್ಣಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಚೆಲುವರಾಯಸ್ವಾಮಿ, ಕೆ.ಹೆಚ್.ಮುನಿಸ್ವಾಮಿ, ಡಾ:ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಪಿ.ನರೇಂದ್ರಸ್ವಾಮಿ, ಬೋಸರಾಜು , ಶಾಸಕರು ಉಪಸ್ಥಿತರಿದ್ದರು.