ಗುಬ್ಬಿ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ (ವಾಸು) ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಈಗ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.
ಜೆಡಿಎಸ್‌ನಲ್ಲಿ ಅಸಮಾಧಾನಗೊಂಡಿರುವ ಅವರು, ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಂಡಿದ್ದರು. ಪಕ್ಷ ತೊರೆಯುವ ಬಗ್ಗೆಯೂ ಹೇಳಿಕೊಂಡಿದ್ದರು.