Gunjan Krishna; ಗ್ಯಾರಂಟಿ ಯೋಜನೆಗಳ ದುರ್ಬಳಕೆಯಾಗದಂತೆ ಪರಿಶೀಲಿಸಿ ಅನುಮೋದಿಸಿ

Gunjan Krishna

ದಾವಣಗೆರೆ,ಆ. 28: ಸರ್ಕಾರ ಸರ್ವರಿಗೂ ಸಮಪಾಲು, ಸಮಬಾಳು ಮತ್ತು ಜನರಿಗೆ ಅನುಕೂಲ ಕಲ್ಪಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಇವುಗಳ ಅನುಷ್ಠಾನದಲ್ಲಿ ದುರ್ಬಳಕೆಯಾಗದಂತೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಕೈಗಾರಿಕಾಭಿವೃದ್ದಿ ಆಯುಕ್ತರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣರವರು (Gunjan Krishna) ಸೂಚನೆ ನೀಡಿದರು.

ಅವರು ಸೋಮವಾರ (ಆ.28) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

siddaramaiah: ಮೋಡ ಬಿತ್ತನೆ ಯಶಸ್ವಿಯಾದ ಉದಾಹರಣೆ ಇಲ್ಲ: ಮುಖ್ಯಮಂತ್ರಿ

ಸರ್ಕಾರದ ಯೋಜನೆಗಳನ್ನು ಬಳಸಿ ಒಂದೇ ಬ್ಯಾಂಕ್ ಖಾತೆಗೆ ಹಲವು ಫಲಾನುಭವಿಗಳ ನೊಂದಣಿಯನ್ನು ಮಾಡಿಸಿ ಹಣ ದುರುಪಯೋಗ ಮಾಡಲಾಗುತ್ತದೆ ಎಂದು ಮಹಾಲೇಖಪಾಲಕರ ವರದಿ ಇದೆ. ಗೃಹಲಕ್ಷ್ಮಿ ಯೋಜನೆಯ ಹಲವು ಫಲಾನುಭವಿಗಳ ಹೆಸರಿಗೆ ಒಂದೇ ಖಾತೆಗೆ ಹಣ ಜಮಾ ಆಗುವಂತೆ ಹ್ಯಾಕ್ ಮಾಡಲಾಗುತ್ತದೆ. ಅದೇ ರೀತಿ ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ.ಅಕ್ಕಿಯ ಬದಲಾಗಿ ನಗದು ನೀಡಲಾಗುತ್ತಿದ್ದು ಈ ವೇಳೆಯು ದುರುಪಯೋಗ ಆಗುವ ಸಂಭವವಿರುತ್ತದೆ, ಅಧಿಕಾರಿಗಳು ಪ್ರತಿಯೊಂದು ಖಾತೆಯನ್ನು ಪರಿಶೀಲನೆ ನಡೆಸಿ ದುರುಪಯೋಗವಾಗದಂತೆ ಅರ್ಹರಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.

ಈ ವರ್ಷ ಬರದ ಛಾಯೆ ಇದ್ದು ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡಬೇಕಾಗಿದೆ. ಸರ್ಕಾರದ ಮಟ್ಟದಲ್ಲಿ ಅಥವಾ ಇಲಾಖೆಗಳಲ್ಲಿ ಯಾವುದಾದರೂ ಸಮಸ್ಯೆಗಳಿದ್ದಲ್ಲಿ ವಿವರವನ್ನು ನನ್ನ ಗಮನಕ್ಕಾಗಲಿ, ಜಿಲ್ಲಾಧಿಕಾರಿಯವರ ಗಮನಕ್ಕಾಗಲಿ ತರಬೇಕು. ಸರ್ಕಾರದಿಂದ ಆಗಬೇಕಾದ ಎಲ್ಲಾ ಕೆಲಸಗಳನ್ನು ಸಮನ್ವಯತೆಯಿಂದ ಮಾಡಲಾಗುತ್ತದೆ ಎಂದು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

bsy; ಬಿಎಸ್ ವೈ ನಾಯಕತ್ವವಿದ್ದರೆ ಮಾತ್ರ ಬಿಜೆಪಿಗೆ ಭವಿಷ್ಯ: ರೇಣುಕಾಚಾರ್ಯ

ಶಕ್ತಿ ಯೋಜನೆ:

ಮಹಿಳೆಯರು ಸಾರಿಗೆ ನಿಗಮದ ಬಸ್‍ಗಳಲ್ಲಿ ಉಚಿತ ಪ್ರಯಾಣ ಯೋಜನೆಯಡಿ ದಾವಣಗೆರೆ ವಿಭಾಗದಿಂದ ಜೂನ್, ಜುಲೈ, ಆಗಸ್ಟ್ 24 ರ ವರೆಗೆ ಒಟ್ಟು 78,15,550 ಪ್ರಯಾಣಿಕರು ಸಂಚರಿಸಿದ್ದು 19.43 ಕೋಟಿ ನಿಗಮಕ್ಕೆ ಆದಾಯ ಬಂದಿರುತ್ತದೆ ಎಂದು ಕೆ.ಎಸ್.ಆರ್.ಟಿ.ಸಿ. ವಿಭಾಗಾಧಿಕಾರಿ ಸಭೆಗೆ ಮಾಹಿತಿ ನೀಡಿದರು. ಈ ವೇಳೆ ಉಸ್ತುವಾರಿ ಕಾರ್ಯದರ್ಶಿಯವರು ಪ್ರಯಾಣಿಸುವಾಗ ಯಾವ ದಾಖಲೆಗಳನ್ನು ಪರಿಗಣಿಸಲಾಗುತ್ತದೆ ಎಂದಾಗ ಶಕ್ತಿ ಪ್ರಯಾಣ ರಾಜ್ಯದ ನಿವಾಸಿಗಳಿಗೆ ಮಾತ್ರ ಇದ್ದು ವಿಳಾಸದ ದೃಢೀಕರಣಕ್ಕಾಗಿ ಮಾತ್ರ ಆಧಾರ್ ಮತ್ತು ಇತರೆ ದಾಖಲೆಗಳನ್ನು ಹಾಜರುಪಡಿಸಬೇಕಾಗುತ್ತದೆ ಎಂದರು.

ಈ ವೇಳೆ ಜಿಲ್ಲಾಧಿಕಾರಿಯವರು ಜಗಳೂರಿಗೆ ಸಂಜೆ ಸಮಯದಲ್ಲಿ ಬಸ್‍ಗಳು ಇರುವುದಿಲ್ಲ ಎಂಬ ದೂರುಗಳಿವೆ ಎಂದಾಗ ಜಗಳೂರಿಗೆ ಸಂಜೆ 7.30 ರ ವರೆಗೆ ಬಸ್‍ಗಳಿದ್ದು ಮುಂದಿನ ತಿಂಗಳು ನಿಗಮಕ್ಕೆ ಹೊಸ ಬಸ್‍ಗಳು ಬರಲಿದ್ದು ಎಲ್ಲೆಲ್ಲಿ ಕೊರತೆ ಇದೆ, ಅಂತಹ ಕಡೆ ಹೊಸ ಬಸ್‍ಗಳನ್ನು ಕಲ್ಪಿಸಲಾಗುತ್ತದೆ ಎಂದರು.

journalists; ರಾಜ್ಯ ಸಮ್ಮೇಳನದ ಪೂರ್ವಭಾವಿ ಸಿದ್ದತೆಗೆ ಅಧಿಕೃತ ಚಾಲನೆ

ಗೃಹಲಕ್ಷ್ಮಿ:

ಮನೆಯ ಒಡತಿ ಯಜಮಾನಿಗೆ ಮಾಸಿಕ ಎರಡು ಸಾವಿರ ನೀಡುವ ಯೋಜನೆ ಇದಾಗಿದ್ದು ಇದನ್ನು ಪಡೆಯಲು ರೇಷನ್ ಕಾರ್ಡ್, ಆಧಾರ್, ಬ್ಯಾಂಕ್ ಖಾತೆಯ ವಿವರ ಕಡ್ಡಾಯವಾಗಿರುತ್ತದೆ. ಜಿಲ್ಲೆಯಲ್ಲಿ 386716 ಗುರಿ ಇದ್ದು ಈಗಾಗಲೇ 324046 ಮಹಿಳೆಯರು ನೊಂದಣಿ ಮಾಡಿದ್ದು ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆಗಸ್ಟ್ 30 ರಂದು ನೊಂದಣಿಯಾದ ಫಲಾನುಭವಿಗಳಿಗೆ ತಲಾ 2 ಸಾವಿರ ಅವರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ಸಭೆಗೆ ಮಾಹಿತಿ ನೀಡಿದಾಗ ಕಾರ್ಯದರ್ಶಿಯವರು ಒಂದೇ ಮೊಬೈಲ್‍ಗೆ ಅನೇಕ ಖಾತೆ, ಆಧಾರ್ ಲಿಂಕ್ ಇರುತ್ತದೆ, ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಗೃಹಜ್ಯೋತಿ:

ದಾವಣಗೆರೆ ಜಿಲ್ಲೆಯಲ್ಲಿ 589364 ಬೆಸ್ಕಾಂ ಗ್ರಾಹಕರಿದ್ದು ಇದರಲ್ಲಿ ಈ ಯೋಜನೆಗೆ 405559 ಗ್ರಾಹಕರು ನೊಂದಾಯಿಸಿದ್ದಾರೆ. ಆಗಸ್ಟ್ 15 ರ ವರೆಗೆ 352131 ಗ್ರಾಹಕರಿಗೆ ಶೂನ್ಯ ಬಿಲ್ ನೀಡಲಾಗಿದೆ. ಗೃಹಜ್ಯೋತಿಗೆ ನೊಂದಾಯಿಸಲು ಅವರ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ಆನ್‍ಲೈನ್ ಮೂಲಕ ಯೋಜನೆಗೆ ನೊಂದಾಯಿಸಬಹುದು. ಇದಕ್ಕೆ ಯಾವುದೇ ಆದಾಯಮಿತಿ ಇರುವುದಿಲ್ಲ ಎಂದು ಬೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.

women; ಮಹಿಳಾ ಸಮ್ಮಾನ್ ಪತ್ರ ಮೇಳ; ಬಿಳಿಚೋಡು ಗ್ರಾಮಕ್ಕೆ ಮೊದಲ ಸ್ಥಾನ

ಬರ ಸಮೀಕ್ಷೆಗೆ ಸಿದ್ದತೆ:

ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಆದರೆ ಜೂನ್ ಮತ್ತು ಆಗಸ್ಟ್ ನಲ್ಲಿ ಮಳೆಯ ಕೊರತೆಯಾಗಿದೆ. ಅಚ್ಚುಕಟ್ಟು ಪ್ರದೇಶದಲ್ಲಿ ಮಾತ್ರ ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲಾಗುತ್ತಿದೆ. ಉಳಿದ ಪ್ರದೇಶದಲ್ಲಿ ಮಳೆಯಾಶ್ರಿತ ಬೆಳೆಗಳಿದ್ದು ಬೆಳೆ ಸಮೀಕ್ಷೆಗೆ ತಂಡಗಳನ್ನು ರಚಿಸಿ ಸಮೀಕ್ಷೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!