ಹಾಡಹಗಲೇ ಜ್ಯುವೆಲ್ಲರ್ಸ್ ಮಾಲೀಕನ ಮೇಲೆ ಗುಂಡಿನ ದಾಳಿ ……ಕೆಫೆ ಬಾಂಬ್ ಬ್ಲಾಸ್ಟ್ ಘಟನೆ ಮಾಸುವ ಮುನ್ನವೇ ಗುಂಡಿನ ದಾಳಿ .! ಬೆಚ್ಚಿಬಿದ್ದ ಜನತೆ.
ಚಿನ್ನದ ಮಳಿಗೆ ಮಾಲೀಕನ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರಿನ ದೇವಿನಗರದಲ್ಲಿ ನಡೆದಿದೆ.
ಇಂದು ಬೆಳಗ್ಗೆ 11 ಗಂಟೆಗೆ ಎರಡು ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ದೇವಿನಗರದಲ್ಲಿರುವ ಲಕ್ಷ್ಮಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಚಿನ್ನಾಭರಣ ಮಳಿಗೆಯ ಮಾಲೀಕ ಹಣ ನೀಡುವುದಕ್ಕೆ ವಿರೋಧಿಸಿದ್ದು ದುಷ್ಕರ್ಮಿಗಳು ಹಾಗೂ ಮಾಲೀಕನ ನಡುವೆ ಮಾತಿನ ಚಕಮಕಿಯಾಗಿದೆ. ಆಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಅಪ್ಪುರಾಮ್, ಅಭಿರಾಮ್ ಎಂಬುವವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪ್ಪುರಾಮ್ ಸ್ಥಿತಿ ಗಂಭೀರವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಮಿಷನರ್ ದಯಾನಂದ್, 11 ಗಂಟೆ ವೇಳೆಗೆ ನಾಲ್ವರು ಆರೋಪಿಗಳು ಬಂದು ಇಬ್ಬರ ಮೇಲೆ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ , ಕಮಿಷನರ್ ದಯಾನಂದ್ ಹಾಗೂ ಕೋಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.