ಲೋಕಲ್ ಸುದ್ದಿ

ಮಾಯಕೊಂಡಕ್ಕೆ ಟಿಕೇಟ್ ನೀಡುವಂತೆ ಹೆಚ್.ದುಗ್ಗಪ್ಪ ಮನವಿ

ದಾವಣಗೆರೆ: ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಕೆಪಿಸಿಸಿ ವೀಕ್ಷಕರಾಗಿ ನೇಮಕಗೊಂಡಿರುವ ಪ್ರಣತಿ ಸುಶೀಲ್‌ಕುಮಾರ್ ಶಿಂಧೆ ಅವರನ್ನು ಭೇಟಿ ಮಾಡಿ ಮಾಯಕೊಂಡ ಮೀಸಲು ಕ್ಷೇತ್ರಕ್ಕೆ ಟಿಕೇಟ್ ನೀಡುವಂತೆ ಕೆಪಿಸಿಸಿ ಎಸ್ಸಿ ಘಟಕದ ಕಾರ್ಯಕಾರಿಣಿ ಸಮಿತಿ ಸದಸ್ಯ ಹೆಚ್. ದುಗ್ಗಪ್ಪ ಮತ್ತು ಅವರ ಪುತ್ರ ಡಿ. ಮನು ಮನವಿ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿರುವ ಅವರು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಬೆಲೆ ಏರಿಕೆ, ನೋಟ್‌ಬ್ಯಾನ್, ಜಿಎಸ್‌ಟಿ, ಸರ್ಕಾರಿ ಇಲಾಖೆಗಳ ಖಾಸಗೀಕರಣ, ಶೇ.೪೦ರಷ್ಟು ಕಮಿಷನ್ ಅಕ್ರಮ ಸೇರಿದಂತೆ ಬಿಜೆಪಿಯ ದುರಾಡಳಿತ ಮತ್ತು ಭ್ರಷ್ಟಾಚಾರದ ಬಗ್ಗೆ ಈಗಾಗಲೇ ತಾವು ಕ್ಷೇತ್ರದ ಜನರಿಗೆ ಮನವರಿಕೆ ಮಾಡಿಕೊಟ್ಟಿರುವುದಾಗಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಶೇ.೫೦ರಷ್ಟು ಮೀಸಲಾತಿ ಕಲ್ಪಿಸುವುದು, ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತರುವುದು, ೨೦೦ ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದು ಹಾಗೂ ಪ್ರತಿಯೊಬ್ಬ ಮಹಿಳೆಗೆ ೨ಸಾವಿರ ರೂ., ಮಾಸಿಕ ಪಿಂಚಣಿ ನೀಡಲಾಗುವುದು ಎಂಬುದು ಸೇರಿದಂತೆ ಪಕ್ಷ ಹೊರತಂದಿರುವ ಪ್ರನಾಳಿಕೆ ಬಗ್ಗೆ ಈಗಾಗಲೇ ಜನರಿಗೆ ಪ್ರಚಾರ ಮಾಡಲಾಗಿದ್ದು, ಇನ್ನು ಮುಂದೆಯೂ ಪ್ರತಿ ಹಳ್ಳಿಗಳಿಗೂ ಪ್ರಚಾರ ಕೈಗೊಂಡು ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಆದ್ದರಿಂದ ಈ ಬಾರಿ ತಮಗೆ ಮಾಯಕೊಂಡ ಕ್ಷೇತ್ರಕ್ಕೆ ಟಿಕೇಟ್ ನೀಡಬೇಕೆಂದು ಮನವಿ ಮಾಡಿದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!