HAL Apprentice: ಹೆಚ್.ಎ.ಎಲ್‍ ನಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನ

HAL

ದಾವಣಗೆರೆ: ಹೆಚ್.ಎ.ಎಲ್ ಬೆಂಗಳೂರು ಇವರಿಂದ ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಕೋಫಾ, ಫೌಂಡ್ರಿಮನ್ & ಶೀಟ್ ಮೆಟಲ್ ವರ್ಕರ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಿದ್ದಾರೆ.

ಅರ್ಜಿ ನಮೂನೆಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಏ.27 ರ ಸಂಜೆ 05 ಗಂಟೆಯೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬಿ-ಬ್ಲಾಕ್, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು. ಅಭ್ಯರ್ಥಿಗಳು apprenticeshipindia.org/ candidate-registration ಈ ವೆಬ್‍ಸೈಟ್‍ನಲ್ಲಿ ನೋಂದಾಯಿಸಿ, ಕಡ್ಡಾಯವಾಗಿ ನೋಂದಣಿ ಸಂಖ್ಯೆಯನ್ನು ತರತಕ್ಕದ್ದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, ದಾವಣಗೆರೆ ದೂರವಾಣಿ ಸಂಖ್ಯೆ:08192-259446 ಇವರನ್ನು ಸಂಪರ್ಕಿಸಬಹುದುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಗಿರೀಶ.ಕೆ.ಎನ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿಗಾಗಿ ಸಂಪರ್ಕಿಸಿ: 9740365719
garudavoice21@gmail.com

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!