ಸಚಿವ ಬೈರತಿ ಬಸವರಾಜ್ ರಿಂದ ಹಾನಗಲ್ ಕ್ಷೇತ್ರದಲ್ಲಿ ಭಾರಿ ಪ್ರಚಾರ

ಹಾನಗಲ್: ಇದೇ 30 ರಂದು ಹಾನಗಲ್ ವಿಧಾನ ಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿ ಪರ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ಅವರು ಶನಿವಾರ ವಾದ ಇಂದು ಸಹ ಬಿರುಸಿನ ಪ್ರಚಾರ ಕೈಗೊಂಡರು.

ಕಳೆದ ಮೂರು ದಿನಗಳಿಂದ ಹಾನಗಲ್ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲವಾರು ಹಳ್ಳಿಗಳಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಹಾಗೂ ಮತದಾರರನ್ನು ಭೇಟಿ ಮಾಡಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶ್ರೀ ಶಿವರಾಜ್ ಸಜ್ಜನರ ಪರ ಮತ ನೀಡಿ ಎಂದು ಪ್ರಚಾರ ಮಾಡಿದ್ದಾರೆ.

ಮೊದಲ ದಿನ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಮತ್ತು ಹಲ ಸಚಿವರ ಜೊತೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ನಂತರ ತಮ್ಮದೇ ರೀತಿಯಲ್ಲಿ ಹಿಂದುಳಿದ ವರ್ಗಗಳ ಮುಖಂಡರು, ಪ್ರಮುಖರು ಹಾಗೂ ಮತದಾರರನ್ನು ‌ಭೇಟಿ ಮಾಡಿ ಬಿಜೆಪಿ ಪಕ್ಷದ ಪರವಾಗಿ ಸೆಳೆಯುವಲ್ಲಿ ಯಶಸ್ವಿಯಾದರು.

ಶನಿವಾರ ಬೆಳಿಗ್ಗೆ ಬೊಮ್ಮನಹಳ್ಳಿ, ಯಲವಟ್ಟಿ, ಉಳ್ಳತ್ತಿ, ಕೊಪ್ಪಸಿ ಕೊಪ್ಪ ಸೇರಿದಂತೆ ಹಲ ಗ್ರಾಮಗಳಿಗೆ ತೆರಳಿ ಅಲ್ಲಿನ ಮುಖಂಡರು, ಕಾರ್ಯಕರ್ತರು ಮತ್ತು ಮತದಾರರನ್ನು ಉದ್ದೇಶಿಸಿ ಮಾತನಾಡಿದ ಬೈರತಿ ಬಸವರಾಜ ಅವರು ಭಾರತೀಯ ಜನತಾ ಪಕ್ಷದ ಸರ್ಕಾರ ಕೇಂದ್ರ ಹಾಗೂ ರಾಜ್ಯದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು, ಜಾರಿಗೆ ತಂದ ಯೋಜನೆಗಳ ಬಗ್ಗೆ ವಿವರಣೆ ನೀಡಿದರು

.

ಬಿಜೆಪಿ ಅಭ್ಯರ್ಥಿ ಗೆ ಮತ ನೀಡಿ ಗೆಲ್ಲಿಸಿದರೆ ಹಾನಗಲ್ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಅದು ಸಹಕಾರಿಯಾಗಲಿದೆ ಎಂದ ಬೈರತಿ ಬಸವರಾಜ ಅವರು ಮನವರಿಕೆ ಮಾಡಿಕೊಟ್ಟರು.

ಹಾವೇರಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾದ ಶ್ರೀ ಮಾರುತಿ ಹರಿಹರ, ಹಿಂದುಳಿದ ವರ್ಗಗಳ ಮುಖಂಡರಾದ ಶ್ರೀ ಭೋಜರಾಜ ಕುರಡಿ ಶ್ರೀ ಪ್ರಶಾಂತ ಸೇರಿದಂತೆ ಹಲ ಮುಖಂಡರು ಇದೇ ವೇಳೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!