ಅದ್ದೂರಿ ಹರಜಾತ್ರೆಗೆ ಕ್ಷಣಗಣನೆ.! ಜಾತ್ರೆ ಯಶಸ್ವಿಗೆ ಸಕಲ ಸಿದ್ಧತೆ.! ಅಡುಗೆ ಕಾರ್ಯದಲ್ಲಿ ಕೈ ಜೋಡಿಸಿದ ಸ್ವಾಮೀಜಿ

ದಾವಣಗೆರೆ: ಹರಿಹರ ನಗರದ ಹೊರವಲಯದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಶುಕ್ರವಾರ ನಡೆಯುವ ಹರ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ.

ಜಾತ್ರೆಯನ್ನು ಯಶಸ್ವಿಗೊಳಿಸಲು ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರು ಶುಕ್ರವಾರ ಖುದ್ದಾಗಿ ಸಿದ್ಧತೆಗಳನ್ನು ಪರಿಶೀಲಿಸಿದರು. ಅಡುಗೆ ಮಾಡುವ ಬಾಣಸಿಗರನ್ನು ಮಾತನಾಡಿಸಿದ ಶ್ರೀಗಳು, ಕೆಲ ಹೊತ್ತು ತಾವು ಅಡುಗೆ ಕಾರ್ಯದಲ್ಲಿ ಕೈ ಜೋಡಿಸಿದರು.
ಮಠದ ಆವರಣದಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿದೆ. 40-60 ಅಡಿ ವೇದಿಕೆಯ ಮೇಲೆ 40 ಗಣ್ಯರಿಗೆ ಸ್ಥಾನ ಕಲ್ಪಿಸಲಾಗಿದೆ. ಕಾರ್ಯಕ್ರಮ ವೀಕ್ಷಿಸಲು 10 ಸಾವಿರ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ.


2ಎ ಮೀಸಲಾತಿ ಹಕ್ಕೊತ್ತಾಯಕ್ಕಾಗಿ ಬೃಹತ್ ಜನಜಾಗೃತಿ ಸಮಾವೇಶ ನಡೆಯಲಿದೆ. ಜ್ಞಾನಯೋಗಾಶ್ರಮದ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳಿಗೆ ನುಡಿನಮನ ಕಾರ್ಯಕ್ರಮ ನೆರವೇರಲಿದೆ. ಮಧ್ಯಾಹ್ನ ನಡೆಯುವ ರೈತ ರತ್ನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!