ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ಹರಪನಹಳ್ಳಿ ಅಭ್ಯರ್ಥಿ ಎಂ.ಪಿ. ಲತಾ

ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ಹರಪನಹಳ್ಳಿ ಅಭ್ಯರ್ಥಿ ಎಂ.ಪಿ. ಲತಾ

ಹೊಸಪೇಟೆ: ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಕಂಡಿರುವ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಅವರ ಹಿರಿಯ ಮಗಳಾದ ಲತಾ ಭಾನುವಾರ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿಯಾಗಿ ಬೆಂಬಲ ಸೂಚಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧೆಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದರಿಂದ ಲತಾ ಅವರು ಪಕ್ಷೇತರರಾಗಿ ಕಣಕ್ಕಿಳಿದು ಜಯಶಾಲಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!