ಹರಿಹರ : ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ದಾವಣಗೆರೆ : ಹರಿಹರದ ಗ್ರಾಮ ದೇವತೆ ಶ್ರೀ ಊರಮ್ಮ ದೇವಿಯ ಜಾತ್ರೆ ಪ್ರಯುಕ್ತ ಮಾ.22ರ ಬೆಳಿಗ್ಗೆ 6 ಗಂಟೆಯಿಂದ ಮಾ. 23ರ ಮಧ್ಯರಾತ್ರಿ 12 ಗಂಟೆಯವರೆಗೆ ಶ್ರೀ ಊರಮ್ಮ ದೇವಿ ದೇವಸ್ಥಾನದ ಸುತ್ತಮುತ್ತ 500 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶದಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ. ಹರಿಹರದ ಗ್ರಾಮ ದೇವತೆ ಶ್ರೀ ಊರಮ್ಮ ದೇವಿಯ ಜಾತ್ರೆಯು ಮಾ.19ರಿಂದ 27ರವರೆಗೆ ನಡೆಯಲಿದ್ದು, ಜಾತ್ರೆ ಪ್ರಯುಕ್ತ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಮಾ.22ರ ಬೆಳಿಗ್ಗೆ 6ರಿಂದ 24ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಲು ಪೊಲೀಸ್ ಅಧೀಕ್ಷಕರು ಕೋರಿದ್ದಾರೆ. ಇದಕ್ಕೆ ಪ್ರತಿಯಾಗಿ ಜಿಲ್ಲಾಧಿಕಾರಿಗಳು ಮಾ.22ರ ಬೆಳಿಗ್ಗೆ 6 ಗಂಟೆಯಿಂದ 23 ರ ಮಧ್ಯರಾತ್ರಿ 12 ರವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.