ಬಿಜೆಪಿ ಅವಧಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ವಾ? ಎಂದ ಸಚಿವ ರಾಮಲಿಂಗರೆಡ್ಡಿ

ದಾವಣಗೆರೆ: ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ವಾ? ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸರಣಿ ಸ್ಫೋಟಗಳಾಗಿತ್ತು. ಮಲ್ಲೇಶ್ವರಂನಲ್ಲಿ ಬಾಂಬ್ ಸ್ಫೋಟ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿದೆ. ಈ ವಿಚಾರ ಇಟ್ಟುಕೊಂಡು ಚುನಾವಣೆಗೆ ಹೋಗೋಣಾ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸವಾಲು ಹಾಕಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಬಿಜೆಪಿ ಅವಧಿಯಲ್ಲಿ 6 ಕಡೆ ಸ್ಫೋಟ ಆಗಿದೆ. ಪ್ರಪಂಚ ಹುಟ್ಟಿದಾಗಿನಿಂದ ಇಂತಹ ಘಟನೆ ಆಗುತ್ತಿವೆ ಎಂದು ಹೇಳಿದರು.
ರಾಮಮಂದಿರಕ್ಕೆ ಬಾಂಬ್‌ ಬೆದರಿಕೆ ಹಾಕಿದ ಹಿನ್ನೆಲೆ ಎಲ್ಲಾ ದೇವಸ್ಥಾನಗಳಲ್ಲೂ ಸೂಕ್ತ ಭದ್ರತೆ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಬೆದರಿಕೆ ಇ-ಮೇಲ್ ಕಳಿಸುತ್ತಾರೆ, ಪೊಲೀಸರು ಎಚ್ಚರಿಕೆ ವಹಿಸುತ್ತಾರೆ. ಎಂಡಿಗೆ ಆದೇಶ ಕೊಟ್ಟಿದ್ದೇನೆ, ತನಿಖೆ ನಡೆಸುತ್ತಾರೆ ಎಂದು ಸಚಿವರು ಹೇಳಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!