ಹಾವೇರಿ ಬಿಜೆಪಿ ಶಾಸಕ ನೆಹಲು ಓಲೆಕಾರ್‌ಗೆ ಹಾಗೂ ಇಬ್ಬರು ಪುತ್ರರಿಗೆ 2 ವರ್ಷ ಜೈಲು ಶಿಕ್ಷೆ
ಬೆಂಗಳೂರು : ಹಾವೇರಿಯ ಬಿಜೆಪಿ ಶಾಸಕ ನೆಹರು ಓಲೆಕಾರ್ ಹಾಗೂ ಅವರ ಇಬ್ಬರು ಮಕ್ಕಳಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ಮಹತ್ವ ತೀರ್ಪು ನೀಡಿದೆ.
50 ಲಕ್ಷ ರೂ. ಮೊತ್ತದ ಕಾಮಗಾರಿ ಪುತ್ರರಿಗೇ ನೀಡಿದ ಆರೋಪದಡಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್ ಮತ್ತು ಪುತ್ರರಾದ ಮಂಜುನಾಥ್, ದೇವರಾಜ್ ಓಲೆಕಾರ್‌ಗೆ ಈ ಶಿಕ್ಷೆ ವಿಧಿಸಲಾಗಿದೆ.