hd deve gowda; ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಸಮಾರಂಭಕ್ಕೆ ಹೆಚ್‌ ಡಿ ದೇವೇಗೌಡ ಗೈರು

ಬೆಂಗಳೂರು, ನ.06: ಅನಾರೋಗ್ಯದ ಕಾರಣ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಸಮಾರಂಭಕ್ಕೆ ಬರಲಾಗುತ್ತಿಲ್ಲ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ ದೇವೇಗೌಡ (hd deve gowda) ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕನ್ನಡನಾಡಿನ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ ನನಗಾಗಿ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅನಾರೋಗ್ಯದ ಕಾರಣಕ್ಕೆ ಹಾಜರಾಗುತ್ತಿಲ್ಲದಿರುವುದಕ್ಕೆ ವೈಯಕ್ತಿಕವಾಗಿ ನನಗೆ ಬಹಳ ನೋವಿದೆ ಎಂದು ಹೇಳಿದ್ದಾರೆ.

Baba Vanga; ಭವಿಷ್ಯ ನುಡಿದ ಭವಿಷ್ಯಗಾರ್ತಿ ಬಾಬಾ ವಂಗಾ? ಏನಿದೆ ಭವಿಷ್ಯದಲ್ಲಿ?

ಕೊಂಚ ಮಟ್ಟಿಗೆ ಅನಾರೋಗ್ಯ ಉಂಟಾಗಿ ದೇಹದಲ್ಲಿ ತುಸು ನಿತ್ರಾಣವಿದೆ. ವೈದ್ಯರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ಸಲಹೆ ಮಾಡಿದ್ದಾರೆ. ಆದರೆ, ಈ ಕಾರ್ಯಕ್ರಮ ಪೂರ್ವನಿಗದಿಯಾಗಿರುವ ಕಾರಣಕ್ಕೆ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಾಧೀಶ ಜಸ್ಟ್ಟಿಸ್ ಎಂ.ಎನ್. ವೆಂಕಟಾಚಲಯ್ಯ ಹಾಗೂ ಪರಿಷತ್ ಅಧ್ಯಕ್ಷರು, ನಾಡೋಜ ಡಾ.ಮಹೇಶ್ ಜೋಶಿ ಅವರು ನನ್ನ ಸ್ವಗೃಹಕ್ಕೆ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದ್ದಾರೆ. ಇವರ ಪ್ರೀತಿ, ವಿಶ್ವಾಸಕ್ಕೆ ನಾನು ಕೃತಜ್ಞನಾಗಿದ್ದೇನೆ.

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ಸ್ವೀಕರಿಸುವುದು ಮಹಾನ್ ಭಾಗ್ಯ ಎಂದೇ ನಾನು ಭಾವಿಸಿದ್ದೇನೆ. ಪ್ರಶಸ್ತಿ ಪ್ರದಾನದ ಸುದ್ದಿ, ಚಿತ್ರ, ದೃಶ್ಯಗಳನ್ನು ತದ ನಂತರ ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುವುದು. ಅಸೌಕರ್ಯ ಉಂಟಾಗಿದ್ದಕ್ಕೆ ಮಾಧ್ಯಮ ಮಿತ್ರರಲ್ಲಿ ಹಾಗೂ ನಾಡಿನ ಜನತೆಗಾಗಿ ವಿಷಾದಿಸುತ್ತೇನೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!