ಪ್ರಣಾಳಿಕೆ ಪ್ರತಿ ಸುಟ್ಟು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ- ಕೆ.ಎಸ್ ಈಶ್ವರಪ್ಪ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ.

Chennai: Congress presidential candidate Mallikarjun Kharge during an event for his election campaign, in Chennai, Friday, Oct. 14, 2022. (PTI Photo/R Senthil Kumar)(PTI10_14_2022_000268B)
ಕಲ್ಬುರ್ಗಿ :ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಪ್ರಜಾಪ್ರಭುತ್ವದಕ್ಕೆ ಅವಮಾನ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಪ್ರಜಾಪ್ರಭುತ್ವದಕ್ಕೆ ಅವಮಾನ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಭಜರಂಗದಳ ನಿಷೇಧದ ಬಗ್ಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ ಹಿನ್ನೆಲೆ ಸುದ್ಧಿಗೋಷ್ಠಿ ನಡೆಸಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರಣಾಳಿಕೆಯನ್ನು ಸುಟ್ಟು ಹಾಕಿದ್ದರು.
ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ. ಪ್ರಣಾಳಿಕೆ ಸುಟ್ಟಿದ್ದು ಜನರಿಗೆ ನೀಡಿದ ಗ್ಯಾರಂಟಿ ಯೋಜನೆಗಳನ್ನು ಸುಟ್ಟು ಹಾಕಿದಂತೆ.
ಈಶ್ವರಪ್ಪ ಮಾಡಿದ್ದು ಸರಿಯಲ್ಲ. ರಾಜ್ಯದಲ್ಲಿ ಈ ರೀತಿಯ ಘಟನೆಗಳು ನಡೆಯಬಾರದು. ಬಿಜೆಪಿಯವರ ಹಿಂದುತ್ವ ಬೇರೆ, ನಮ್ಮ ಹಿಂದುತ್ವವೇ ಬೇರೆ. ನಾನು ಹಿಂದೂ, ಅವರು ಕೂಡ ಹಿಂದೂ ಎಂದು ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.