ಜಮ್ಮು& ಕಾಶ್ಮೀರದ ʼಉಧಮ್ಪುರದ ಸಲಾಥಿಯಾ ಚೌಕ್ʼನಲ್ಲಿ ಭಾರೀ ಸ್ಫೋಟ : ಓರ್ವ ಸಾವು, 15 ಮಂದಿ ಗಂಭೀರ ಗಾಯ
ಬೆಂಗಳೂರು : ಜಮ್ಮು ಪ್ರದೇಶದ ಉಧಂಪುರ ಪಟ್ಟಣದ ಜಿಲ್ಲಾ ನ್ಯಾಯಾಲಯದ ಹೊರಗೆ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಬಳಿಕ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಎಲ್ಲ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಯ ನಂತರ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳೊಂದಿಗೆ ಪೊಲೀಸರು ಕೂಡ ಅಲ್ಲಿಗೆ ತಲುಪಿದ್ದಾರೆ. ಸಲಾಥಿಯಾ ಚೌಕ್ ಬಳಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಿಕ್ಕಿರುವ ಮಾಹಿತಿ ಪ್ರಕಾರ ತರಕಾರಿ ಮಾರುವವರ ಬೀದಿಯಲ್ಲಿ ಸ್ಫೋಟ ಸಂಭವಿಸಿದೆ. ಮತ್ತೊಂದೆಡೆ, ಉಧಮ್ಪುರದ ತಹಸೀಲ್ದಾರ್ ಕಚೇರಿ ಬಳಿ ರೆಹ್ರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 13 ಜನರು ಗಾಯಗೊಂಡಿದ್ದಾರೆ ಎಂದು ಪಿಎಂಒ ಸಚಿವ ಡಾ. ಜಿತೇಂದ್ರ ಸಿಂಗ್ ಸಂದೇಶದಲ್ಲಿ ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಪೊಲೀಸರು ಮತ್ತು ಆಡಳಿತಕ್ಕೆ ಆದೇಶಿಸಲಾಗಿದೆ. ಇದರೊಂದಿಗೆ ಎಲ್ಲಾ ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಕೋರಲಾಗಿದೆ. ಸ್ಫೋಟಕ್ಕೆ ನಿಖರ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ.