5, 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು

High Court Astu for Class 5, 8 Board Exam

5, 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: 5 ಹಾಗೂ 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಉಚ್ಛನ್ಯಾಯಾಲಯ ಅನುಮತಿ ನೀಡಿದೆ.
ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ನ್ಯಾಯಾಲಯ, ಹತ್ತು ದಿನದ ಬಳಿಕ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವಿಚಾರಣೆ ನಡೆಸಿದ್ದ ಹೈ ಕೋರ್ಟ್ ಸುತ್ತೋಲೆ ದ್ದುಪಡಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ಇಂದಿಗೆ ವಿಚಾರಣೆ ಮುಂದೂಡಿತ್ತು.
ಇಂದು ವಿಚಾರಣೆ ಪೂರ್ಣಗೊಳಿಸಿ ಆದೇಶ ನೀಡಿದ್ದು, ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ. ಪರೀಕ್ಷೆ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟ ಮಾಡುವಂತಿಲ್ಲ ಎಂದು ಆದೇಶಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!