ಜಿಎಂಐಟಿ ವಿದ್ಯಾರ್ಥಿನಿಗೆ ಅತ್ಯಧಿಕ ಪ್ಯಾಕೇಜ್ ಆಫರ್
ಜಿಎಂಐಟಿ: ಹಲವು ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ನಡೆದ ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಹಲವು ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಲ್ಲಿಯವರೆಗೂ 2022 ಬ್ಯಾಚ್ ನ ಹೊರಹೋಗುವ ವಿದ್ಯಾರ್ಥಿಗಳ ಪೈಕಿ 397 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಇನ್ನೂ ಹಲವು ಪ್ರತಿಷ್ಠಿತ ಕಂಪನಿಗಳು ಬರಲಿದ್ದು ವಿದ್ಯಾರ್ಥಿಗಳಿಗೆ ಅದಕ್ಕೆ ಬೇಕಾದ ತರಬೇತಿಯನ್ನು ನೀಡುತ್ತಿದ್ದೇವೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಇದೇ ವೇಳೆ ತಿಳಿಸಿದರು.
ಇತ್ತೀಚಿಗೆ ನಡೆದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ಅಮೆರಿಕ ಮೂಲದ ಟಾರ್ಗೆಟ್ ಕಾರ್ಪೋರೇಷನ್ ಕಂಪನಿ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಬಿಂದುಶ್ರೀ ಟಿ ಯು ಆಯ್ಕೆಯಾಗಿ ಕಂಪನಿಯ ಅತ್ಯಧಿಕ ಪ್ಯಾಕೇಜ್ ವಾರ್ಷಿಕ 13.3 ಲಕ್ಷ ಗಿಟ್ಟಿಸಿಕೊಂಡಿದ್ದಾರೆ.
ಕುಮಾರಿ ಬಿಂದುಶ್ರೀ ಮಾತನಾಡಿ, ವಿಭಾಗದ ಅಧ್ಯಾಪಕರುಗಳ ಪ್ರೋತ್ಸಾಹ ಹಾಗೂ ತರಬೇತಿಯ ಅನುಭವ ಈ ಒಂದು ಸಂದರ್ಶನವನ್ನು ಎದುರಿಸಲು ಸಹಾಯವಾಯಿತು ಎಂದು ತಿಳಿಸಿದರು. ನೇರವಾಗಿ ಮತ್ತು ಪರೋಕ್ಷವಾಗಿ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದವನ್ನು ಅರ್ಪಿಸಿದರು.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಷ್ ಚಂದ್ರ, ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್, ವಿಭಾಗದ ಮುಖ್ಯಸ್ಥರಾದ ಡಾ ಪ್ರವೀಣ್ ಜೆ, ವಿಭಾಗದ ಸಂಯೋಜಕರಾದ ಶ್ರೀ ಸಂಪತ್ ಕುಮಾರ ಮತ್ತು ಅಧ್ಯಾಪಕ ವರ್ಗದವರು ಅಭಿನಂದಿಸಿದ್ದಾರೆ.