ಹಿಜಾಬ್ ವಿಚಾರಣೆಗೆ `ಸುಪ್ರೀಂ’ ಅಸ್ತು

ಹಿಜಾಬ್ ವಿಚಾರಣೆಗೆ `ಸುಪ್ರೀಂ' ಅಸ್ತು

ನವದೆಹಲಿ: ವಿದ್ಯಾರ್ಥಿನಿಯರ ಗುಂಪೊಂದು ಮುಂಬರುವ ಪಿಯುಸಿ ಪರೀಕ್ಷೆಯಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ವಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಬುಧವಾರ ಒಪ್ಪಿಗೆ ನೀಡಿದೆ.

ಅರ್ಜಿಯ ವಿಚಾರಣೆ ನಡೆಸಲು ಒಪ್ಪಿದ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಹಾಗೂ ಪಿ.ಎಸ್‌ ನರಸಿಂಹ ಅವರಿದ್ದ ಪೀಠ, ಅರ್ಜಿಯನ್ನು ಪಟ್ಟಿ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದೆ.

ಪಿಯು ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧ ಸಂಬಂಧ,  2022ರ ಅಕ್ಟೋಬರ್‌ 13 ರಂದು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿತ್ತು. ಅಲ್ಲದೇ ತ್ರಿದಸ್ಯ ಪೀಠಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು.

ಆದರೆ ಮಾರ್ಚ್‌ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ವಿದ್ಯಾರ್ಥಿನಿಯರ ಪರ ವಕೀಲ ಶಾದನ್‌ ಫರಾಸತ್‌ ಅವರು ಪೀಠಕ್ಕೆ ಮನವಿ ಮಾಡಿದರು.

ಈಗಾಗಲೇ ಹಿಜಾಬ್‌ ವಿವಾದದಿಂದಾಗಿ ವಿದ್ಯಾರ್ಥಿನಿಯರ ಒಂದು ವರ್ಷ ನಷ್ಟವಾಗಿದೆ. ಮತ್ತೊಂದು ವರ್ಷ ನಷ್ಟ ಆಗದೇ ಇರಲು,  ಅವರಿಗೆ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಈ ಎಲ್ಲಾ ವಿದ್ಯಾರ್ಥಿಗಳು ಈಗ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಪರೀಕ್ಷೆ ಬರೆಯಲು ಸರ್ಕಾರಿ ಕಾಲೇಜಿಗೆ ತೆರಳಬೇಕು. ಹೀಗಾಗಿ ಅಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!