ಹಿಜಾಬ್ ತೀರ್ಪು ಸ್ವಾಗತಾರ್ಹ- ಸಚಿವ ಕೆ ಎಸ್ ಈಶ್ವರಪ್ಪ
ಶಿವಮೊಗ್ಗ; ಕರ್ನಾಟಕ ಉಚ್ಚ ನ್ಯಾಯಲಯ ಹಿಜಾಬ್ ಕುರಿತು ನೀಡಿರುವ ತೀರ್ಪು ಸ್ವಾಗತಾರ್ಹ. ಹಿಜಾಬ್ ಸಮವಸ್ತ್ರದ ಭಾಗವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.
ಈ ತೀರ್ಪು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು.
ಹಿಜಾಬ್ ಧರಿಸಬೇಕು ಎಂದು ಶಾಲೆಯಿಂದ ದೂರವುಳಿದಿರುವ ವಿದ್ಯಾರ್ಥಿನಿಯರು ಕೂಡಲೆ ಶಾಲೆಗೆ ತೆರಳಬೇಕು ಎಂದು ಕೋರುತ್ತೇನೆ.
ಎಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ *ಶ್ರೀ ಕೆ ಎಸ್ ಈಶ್ವರಪ್ಪ ರವರು * ತಿಳಿಸಿದ್ದಾರೆ.