‘ಹಿಂದಿ ದಿವಸ್’ ಆಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ವಿರೋಧ: ರಾಷ್ಟ್ರೀಕೃತ ಬ್ಯಾಂಕುಗಳ ಮುಂದೆ ಪ್ರತಿಭಟನೆ

 

ದಾವಣಗೆರೆ: ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣ ದಾವಣಗೆರೆ ಜಿಲ್ಲಾ ಘಟಕ ವತಿಯಿಂದ ಹಿಂದಿ ದಿವಸ್ ವಿರೋಧಿಸಿ ಪ್ರತಿಭಟನೆ ನಡೆಸಿತು.
ನಗರದ ಅಕ್ಕಮಹಾದೇವಿ ರಸ್ತೆಯಿಂದ ಹೊರಟ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂಡಿಯನ್ ಬ್ಯಾಂಕ್ ಮುಂಬಾಗ ಹಿಂದಿ ದಿವಸ್ ಆಚರಣೆಗೆ ವಿರೋಧ ವ್ಯಕ್ತಪಡಿಸಿದರು
ಮುಂದುವರಿದು ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಗಳ ಶಾಖೆಗಳಲ್ಲಿ ಕನ್ನಡ ಸೇವೆಗಳ ನೀಡಬೇಕು ಎಂದು ಆಗ್ರಹಿಸಿದರು.

ಹಾಗೂ ಹಿಂದಿ ದಿವಸ್ ಆಚರಣೆ ರದ್ದಾಗಬೇಕು, ಕರ್ನಾಟಕದ ಬ್ಯಾಂಕುಗಳ ಉದ್ಯೋಗಳನ್ನು ಕನ್ನಡಿಗರಿಗೆ ನೀಡಬೇಕು ಕರ್ನಾಟಕದ ಎಲ್ಲಾ ರಾಷ್ಟ್ರೀಕೃತಬ್ಯಾಂಕ್ ಗಳಲಿ ಶಾಖೆಗಳಲ್ಲಿ ಕನ್ನಡದಲ್ಲಿ ವ್ಯವಹರಿಸಬೇಕು, ಎಂದು ಒತ್ತಾಯಿಸಿದರು.
ನಂತರ ಎಲ್ಲಾ ರಾಷ್ಟ್ರದ ಬ್ಯಾಂಕ್ ಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಎಂಎಸ್ ರಾಮೇಗೌಡ, ಸಂತೋಷ ಧರ್ಮರಾಜ್. ಮಹಿಳಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಬಸಮ್ಮ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು

Leave a Reply

Your email address will not be published. Required fields are marked *

error: Content is protected !!