ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ಹತ್ಯೆ, ದೇವಸ್ಥಾನಗಳ ಮೇಲಿನ ದಾಳಿ ಖಂಡಿಸಿ: ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ದಾವಣಗೆರೆ: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹತ್ಯೆ, ದೇವಸ್ಥಾನಗಳ ಮೇಲಿನ ದಾಳಿ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದೇ ವೇಳೆ ಮಾತನಾಡಿದ ವೇದಿಕೆಯ ವಿಭಾಗ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಸಿ, ಪ್ರಾಣ ಹಾನಿ ಮಾಡಲಾಗುತ್ತಿದೆ. ಹಿಂದೂ ದೇವಸ್ಥಾನಗಳ ಮತ್ತು ಮನೆಗಳ ಮೇಲೆ ದಾಳಿ ನಡೆಯುತ್ತಿದ್ದರೂ ಸಹ ಅಲ್ಲಿನ ಸರ್ಕಾರ ದಾಳಿಕೋರರ ವಿರುದ್ಧ ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ರಕ್ಷಣೆ ಮಾಡಬೇಕಿರುವುದು ಅಲ್ಲಿನ ಸರ್ಕಾರದ ಕರ್ತವ್ಯವಾಗಿದ್ದು, ಕೂಡಲೇ ದಾಳಿಕೋರರ ವಿರುದ್ಧ ಕ್ರಮ ಕೈಗೊಂಡು ಹಿಂದುಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ನಂತರ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಎಸಿ ಮುಖಾಂತರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ವೇದಿಕೆಯ ಪ್ರಧಾನ ಕಾರ್ಯದರ್ಶಿ ಡಿ.ವಿ. ಪ್ರಶಾಂತ್, ವಿಶ್ವನಾಥ್, ಗಣೇಶ್, ಚೇತನ್, ಪುನೀತ್, ರಾಕೇಶ್, ವಿಜಯ್, ಅನಿಲ್, ಚಂದ್ರಮೌಳಿ, ಗಣಪತಿ, ಮಂಜುನಾಥ್, ಶಿವಾಜಿ, ಆನಂದ್, ಪುರುಷೋತ್ತಮ, ದರ್ಶನ್, ಕೊಟ್ರೇಶ್ ಮತ್ತಿತರರು ಪಾಲ್ಗೊಂಡಿದ್ದರು.