ಬಸವರಾಜು ವಿ ಶಿವಗಂಗಾ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪೆಗೊಂಡ ಹಿರೇಗಂಗೂರು ಯುವ ನಾಯಕರು

ಚನ್ನಗಿರಿ : ಕ್ಷೇತ್ರದಲ್ಲಿ ಯುವಕರು ಉತ್ಸಾಹದಿಂದ ಕಾಂಗ್ರೆಸ್ ಪಕ್ಷದತ್ತ ಒಲವು ತೋರುತ್ತಿದ್ದಾರೆ. ಪ್ರತಿ ಗ್ರಾಮಗಳಲ್ಲೂ ಯುವ ಜನತೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಎನ್ನುತ್ತಿದ್ದಾರೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜು ವಿ ಶಿವಗಂಗಾ ತಿಳಿಸಿದರು. ಹಿರೇಗಂಗೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗ್ರಾಮ ಪಂಚಾಯ್ತಿ ಸದಸ್ಯರಾದ ವಿಶ್ವನಾಥ್ ಹಾಗೂ ರುದ್ರೇಶ್ ಭೈರೇಶ್, ಮಂಜುನಾಥ್ ಸೇರಿದಂತೆ ಹಲವು ಯುವ ನಾಯಕರು ಸೇರ್ಪಡೆಯಾದ ಸಂದರ್ಭದಲ್ಲಿ ಈ ವಿಷಯ ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಮತ್ತಷ್ಟು ಬಲ ಬರುತ್ತಿದೆ ಎಂದರು. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಇಂದು ಯುವ ಜನತೆ ಪಕ್ಷಕ್ಕೆ ಬರುತ್ತಿದ್ದು ಪಕ್ಷ ಸಂಘಟನೆಗೆ ಹೆಚ್ಚಾಗುತ್ತಿದೆ. ಕೆಪಿಸಿಸಿ ಸೂಚನೆ ಮೇರೆಗೆ ಪ್ರತಿ ಗ್ರಾಮದಲ್ಲೂ ಬೂತ್ ಮಟ್ಟದ ಸಮಿತಿ ರಚನೆ ಮಾಡಲಾಗಿದ್ದು ಪಕ್ಷದ ಸಂಘಟನೆಗೆ ನಿರಂತರವಾಗಿ ಒತ್ತು ನೀಡಲಾಗುತ್ತಿದೆ. ಈ ಬಾರಿ 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ನಿಶ್ಚಿತ ಎಂದರು. ಚನ್ನಗಿರಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬೆಂಬಲ ಸಿಗುತ್ತಿದೆ, ಗ್ರಾಮಾಂತರ ಪ್ರದೇಶದಲ್ಲಿ ಪಕ್ಷದ ಹಿರಿಯರ ಸಲಹೆ ಮೇರೆಗೆ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಚುನಾವಣೆ ಹತ್ತಿರುವ ಇರುವ ಕಾರಣ ಕಾಂಗ್ರೆಸ್ ಪಕ್ಷ ಅಧಿಕಾರವಧಿಯಲ್ಲಿ ಜಾರಿಗೆ ತಂದ ಜನ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುತ್ತಿದ್ದೇನೆ. ಮನೆ ಮನೆಗೆ ಸ್ಥಳೀಯ ಪಕ್ಷದ ನಾಯಕರೊಂದಿಗೆ ಭೇಟಿ ಮಾಡಲಾಗುತ್ತಿದೆ ಎಂದರು. ಪಕ್ಷದ ಸಂಘಟನೆಗೆ ಹಗಲಿರುಳು ಶ್ರಮಿಸುತ್ತಿದ್ದು ಪಕ್ಷವನ್ನ ಅಧಿಕಾರಕ್ಕೆ ತರುವವರೆಗೂ ನಿದ್ದೆ ಮಾಡಲ್ಲ ಶಪಥ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ರುದ್ರೇಶ್, ಸಹಕಾರ ಸಂಘದ ನಿರ್ದೇಶಕರಾದ ಮಂಜುನಾಥ್, ಯುವ ಮುಖಂಡರಾದ ಚಿರಂಜೀವಿ, ಶಾಂತ ಕುಮಾರ್ ಸಂತೋಷ್, ಲೋಕೇಶ್, ಚೇತನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 
                         
                       
                       
                       
                       
                       
                       
                      