ಹೋರಿ ಬೆದರಿಸುವ ಕಾರ್ಯಕ್ರಮ ನಡೆಸಿದರೆ ಸೂಕ್ತ ಕಾನೂನು ಕ್ರಮ – ಹೊನ್ನಾಳಿ ಪೊಲೀಸ್ ರಿಂದ ನೋಟಿಸ್ ಜಾರಿ

ದಾವಣಗೆರೆ: ದೀಪಾವಳಿ ಪ್ರಯುಕ್ತ ಹೋರಿ ಬೆದರಿಸುವ ಕಾರ್ಯಕ್ರಮ ನಡೆಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಹೊನ್ನಾಳಿ ಗ್ರಾಮಸ್ಥರಿಗೆ ಪೊಲೀಸ್ ಉಪಾಧೀಕ್ಷಕರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹೊನ್ನಾಳಿಯಲ್ಲಿ ಹೋರಿ ಬೆದರಿಸುವ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹೋರಿ ಬೆದರಿಸುವುದರಿಂದ ಸಾರ್ವಜನಿಕರಿಗೆ ಜೀವ ಹಾನಿ ಉಂಟಾಗುವ ಸಾಧ್ಯತೆ ಇರುವುದರಿಂದ ಸರ್ಕಾರವು ಹೋರಿ ಬೆದರಿಸುವ ಕಾರ್ಯಕ್ರಮವನ್ನು ರದ್ದುಗೊಳಿಸಿದೆ. ಆದ್ದರಿಂದ ಹೋರಿ ಬೆದರಿಸುವ ಕಾರ್ಯ ಕ್ರಮ ನಡೆಸುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.
ಆದಾಗ್ಯೂ ಹೋರಿ ಬೆದರಿಸುವ ಕಾರ್ಯಕಗರಮ ಆಯೋಜಿಸಿದ್ದು ಕಂಡುಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.