Honnali Gym: ವ್ಯಾಯಾಮ ಶಾಲೆಗೆ ಚಾಲನೆ ನೀಡಿದ ರೇಣುಕಾಚಾರ್ಯ | ಕೊಂಚ ಕಸರತ್ತು ಮಾಡಿ ಉಪಕರಣ ಪರಿಶೀಲಿಸಿದ ಹೊನ್ನಾಳಿ ಹೋರಿ
ದಾವಣಗೆರೆ: ಹೊನ್ನಾಳಿ ತಾಲ್ಲೂಕು ಕ್ರೀಡಾಂಗಣದಲ್ಲಿ ವ್ಯಾಯಾಮ ಶಾಲೆಗೆ ಪುರುಷರ ಮತ್ತು ಮಹಿಳೆಯರಿಗೆ ₹20 ಲಕ್ಷ ವೆಚ್ಚದ ವ್ಯಾಯಾಮ ಪರಿಕರಗಳನ್ನು ಸರ್ಕಾರದಿಂದ ಮಂಜೂರು ಮಾಡಲಾಗಿದ್ದು ಇಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಅವರು, ಈ ಹಿಂದೆ ನನ್ನ ಅವಧಿಯಲ್ಲಿ ₹1 ಕೋಟಿ ವೆಚ್ಚದಲ್ಲಿ ವ್ಯಾಯಾಮ ಶಾಲೆ ನಿರ್ಮಿಸಿದ್ದು, ಕ್ರೀಡಾಂಗಣ ಅಭಿವೃದ್ಧಿಗೆ ಇನ್ನೂ ₹1.50 ಲಕ್ಷಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಈ ವ್ಯಾಯಾಮ ಶಾಲೆಯನ್ನು ಹೊನ್ನಾಳಿ ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರು, ಸದಸ್ಯರುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.