ಹೊನ್ನಾಳಿ-ನ್ಯಾಮತಿ ಅತಿವೃಷ್ಠಿ ತಾಲ್ಲೂಕೆಂದು ಘೋಷಿಸಲು ಶಾಸಕ ರೇಣುಕಾಚಾರ್ಯ ರಿಂದ ಸಿಎಂಗೆ ಮನವಿ

ದಾವಣಗೆರೆ: ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಸಾಕಷ್ಟು ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಅವಳಿ ತಾಲೂಕನ್ನು ಅತಿವೃಷ್ಟಿ ಪೀಡಿತ ತಾಲೂಕು ಎಂದು ಘೋಷಣೆ ಮಾಡಿ, ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನ ಸಿಎಂ ನಿವಾಸದಲ್ಲಿ ಮನವಿ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ವಾಯುಭಾರ ಕುಸಿತದಿಂದ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಅತೀವ ಮಳೆಯಾಗಿದ್ದು, ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಜೊತೆಗೆ, ಸಾಕಷ್ಟು ಮನೆಗಳಿಗೆ ಹಾನಿಯಾಗಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಅವಳಿ ತಾಲೂಕನ್ನು ಅತಿವೃಷ್ಟಿ ಪೀಡಿತ ತಾಲೂಕು ಎಂದು ಘೋಷಣೆ ಮಾಡುವುದರ ಜೊತೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಈ ಸಂದರ್ಭ ಇಂಧನ ಸಚಿವ ಸುನೀಲ್ ಕುಮಾರ್ ಇದ್ದರು.