ದಾವಣಗೆರೆ ಹೊರ ವಲಯದಲ್ಲಿ ಅಪಘಾತ; ಮೂರು ಸಾವು
ದಾವಣಗೆರೆ: ಮೆಣಸಿನ ಕಾಯಿ ಖರೀದಿಗೆ ತೆರಳಿ ವಾಪಾಸ್ ಬರುತ್ತಿದ್ದ ವೇಳೆ ನಗರದ ಹೊರ ವಲಯದಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಬೋಲೆರೋ ವಾಹನದ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾವಣಗೆರೆ ಹೊರವಲಯದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಮೃತಪಟ್ಟವರೆಲ್ಲರೂ ಆಂಧ್ರ ಮೂಲದವರಾಗಿದ್ದಾರೆಂದು ಹೇಳಲಾಗುತ್ತಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಮೃತಪಟ್ಟವರು ಆಂಧ್ರ ಮೂಲದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಸಿಂಗರಾಜನಹಳ್ಳಿ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಹಾವೇರಿ ಜಿಲ್ಲೆ ಬ್ಯಾಡಿಗೆಯಿಂದ ಮೆಣಸಿನಕಾಯಿ ಖರೀದಿಗೆ ತೆರಳಿ ವಾಪಸ್ ಬರುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.