ರಾಜ್ಯ ಸುದ್ದಿ

HSRP ನಂಬರ್ ಪ್ಲೇಟ್ ರಾಜ್ಯದ ಎಲ್ಲಾ ಅರ್ಹ ಕಂಪನಿಗಳಿಗೆ ಅವಕಾಶ; ಸಾರಿಗೆ ಸಚಿವರ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ವಿಚಾರದಲ್ಲಿ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರಂಭಿಸಿರುವ ಹೋರಾಟಕ್ಕಷ್ಟೇ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ.

ಇದೇ ವೇಳೆ, ಹಿಂದಿನ ಸರ್ಕಾರದ ಅವಧಿಯಲ್ಲಿ ತಪ್ಪುಗಳು ಆಗಿದ್ದರೆ ಸರಿಪಡಿಸುವುದಾಗಿ ಭರವಸೆ ನೀಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರನ್ನು ರಾಜ್ಯದ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಹಾಗೂ ಸಮತಾ ಸೈನಿಕ ದಳ ವಿದ್ಯಾರ್ಥಿ ಒಕ್ಕೂಟ ಅಭಿನಂಧಿಸಿದೆ.

ಅಪರಾಧ ಕೃತ್ಯಗಳನ್ನು ತಡೆಯಲು ಹಾಗೂ, ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ HSRP ಅಳವಡಿಕೆ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶಿಷ್ಟ ನಂಬರ್ ಪ್ಲೇಟ್’ಗಳನ್ನು ತಯಾರಿಸುವ ಸುಮಾರು 20 ಕಂಪನಿಗಳಿಗೆ ಕೇಂದ್ರ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಕೆಲವು ಮಾಫಿಯಾಗಳ ಒತ್ತಡಕ್ಕೊಳಗಾಗಿ ಕೇವಲ 4-5 ಕಂಪನಿಗಳ ಉತ್ಪನ್ನಗಳಿಗಷ್ಟೇ ಅನುಮತಿ ನೀಡಲು ರಹಸ್ಯ ತಯಾರಿ ನಡೆದಿದೆ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಸಿಎಂ ಹಾಗೂ ಸಾರಿಗೆ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ಜನಸ್ನೇಹಿ ಕ್ರಮಕ್ಕೆ ಕ್ರಮಕೈಗೊಳ್ಳಬೇಕೆಂದು ಎಂದು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಲೋಕೇಶ್ ರಾಮ್ ಆಗ್ರಹಿಸಿದ್ದರು.

ಸಚಿವ ರಾಮಲಿಂಗ ರೆಡ್ಡಿಯವರ ಹೇಳಿಕೆ ಸ್ವಾಗತಾರ್ಹ:

ಈ ಹೋರಾಟವನ್ನು ಬೆಂಬಲಿಸಿರುವ ರಾಜ್ಯದ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಡಾ.V.S.ವೆಂಕಟಾಚಲ ಹಾಗೂ ಸಮತಾ ಸೈನಿಕ ದಳ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಜಿ.ಗೋಪಾಲ್ ಅವರು, ಈ ವಿಚಾರದಲ್ಲಿ ಸರ್ಕಾರ ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂಬ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರ ಹೇಳಿಕೆ ಸ್ವಾಗತಾರ್ಹ ಎಂದಿದ್ದಾರೆ.

ಈ ವಿಚಾರದಲ್ಲಿ ಸಾರಿಗೆ ಸಚಿವರು ಜನಪರ ಕ್ರಮ ಅನುಸರಿಸುವ ಭರವಸೆಯನ್ನು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಭರವಸೆ ನೀಡಿದ್ದಾರೆ. HSRP ಕುರಿತ ಕಡತ ಇನ್ನೂ ಸರ್ಕಾರದ ಬಳಿ ಬಂದಿಲ್ಲ, ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಎಷ್ಟು ಕಂಪನಿಗಳಿವೆಯೋ ಅಷ್ಟಕ್ಕೂ ಅನುಮತಿ ಕೊಡುತ್ತೇವೆ. ಈ ಬಗ್ಗೆ ಅಂತಿಮ‌ ಆದೇಶ ಬರುತ್ತಲ್ವಾ ಆಗ ನಿಮಗೇ ಗೊತ್ತಾಗುತ್ತದೆ’ ಎಂದು ಹೇಳುವ ಮೂಲಕ ಸಚಿವ ರಾಮಲಿಂಗ ರೆಡ್ಡಿ ಅವರು ತಮ್ಮ ಸರ್ಕಾರ ಜಾಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲೇ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿರುವ ಈ ಹೋರಾಟಗಾರರು, ಈ ವಿಚಾರದಲ್ಲಿ ಜನರ ಹಿತಾಸಕ್ತಿ ಗಮನಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಸಾರಿಗೆ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ದೇಶದಲ್ಲಿ ಪ್ರಸಕ್ತ ಇರುವ ಸುಮಾರು 30 ಕೋಟಿ ಹಳೆಯ ವಾಹನಗಳ ಪೈಕಿ ಕರ್ನಾಟಕದಲ್ಲೇ 2 ಕೋಟಿಗೂ ಹೆಚ್ಚು ವಾಹನಗಳಿವೆ ಎಂದು ಅಂದಾಜಿಸಲಾಗಿದೆ. ಈ ವಾಹನಗಳಿಗೆ HSRP ಪೂರೈಸಲು ಕೆಲವೇ ಕಂಪನಿಗಳಿಗೆ ಮಾತ್ರ ಅವಕಾಶ ನೀಡಿದಲ್ಲಿ ಕೆಲ ಮಧ್ಯವರ್ತಿ ನಿಯಂತ್ರಣಾ ಮಾಫಿಯಾ ಹುಟ್ಟಿಕೊಂಡು ಮಾರುಕಟ್ಟೆಯಲ್ಲಿ ಏಕಸ್ವಾಮ್ಯದ ಅಧಿಪತ್ಯ ಸ್ಥಾಪಿಸುತ್ತದೆ. ಇದರಿಂದ ಈ ಉದ್ಯಮವನ್ನೇ ನಂಬಿರುವ ಸುಮಾರು 20 ಸಾವಿರ ಕುಟುಂಬಗಳೂ ಬೀದಿಗೆ ಬೀಳಬಹುದು ಎಂದು ಡಾ.ವೆಂಕಟಾಚಲ ಹಾಗೂ ಜಿ.ಗೋಪಾಲ್ ಅವರು ಸಾರಿಗೆ ಸಚಿವರ ಗಮನ ಸೆಳೆದಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top