ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಬೆಂಬಲ ಬೆಲೆ ಕಾಯಿದೆಗೆ ಆಗ್ರಹಿಸಿ ಪ್ರತಿಭಟನೆ
ದಾವಣಗೆರೆ: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾಯಿದೆ ರೂಪಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಸೆ.13 ರಂದು ಮಧ್ಯಾಹ್ನ 11.30 ಕ್ಕೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಗರದ ಜಯದೇವ ವೃತ್ತದಿಂದ ಪ್ರತಿಭಟನೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ನಂತರ ಜಿಲ್ಲಾಡಳಿತದ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ತಿಳಿಸಿದ್ದಾರೆ.