ಹರಿಹರದಲ್ಲಿ ಚಿಕನ್ ಅಡುಗೆ ವಿಚಾರಕ್ಕೆ ಪತ್ನಿ ಕೊಂದ ಪತಿ!

ದಾವಣಗೆರೆ: ಇಂದು ಚಿಕ್ಕಪುಟ್ಟ ವಿಚಾರಕ್ಕೆ ಕೊಲೆಯಾಗುತ್ತಿರುವುದು ಸಾಮಾನ್ಯವಾಗಿ ಬಿಟ್ಟಿದೆ. ಹೀಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕು ವ್ಯಾಪ್ತಿಯ ಬನ್ನಿಕೋಡು ಗ್ರಾಮದಲ್ಲಿ ಚಿಕನ್ ಅಡುಗೆ ವಿಚಾರಕ್ಕೆ ಆರಂಭವಾದ ಗಲಾಟೆ ಹೆಂಡ್ತಿಯ ಸಾವಿನೊಂದಿಗೆ ಅಂತ್ಯವಾಗಿದ್ದು ವಿಪರ್ಯಾಸವೇ ಸರಿ.ಹರಿಹರದ ಬನ್ನಿಕೋಡು ಗ್ರಾಮದಲ್ಲಿ ಗಂಡ ಹೆಂಡತಿಯ ನಡುವೆ ಚಿಕನ್ ಊಟದ ವಿಚಾರವಾಗಿ ಜಗಳವಾಗಿ ತಾರಕಕ್ಕೇರಿ ಕೋಪಗೊಂಡ ಪತಿ ಪತ್ನಿಯನ್ನೇ ಚಾಕುವಿನಿಂದ ಹಿರಿದುಕೊಲೆ ಮಾಡಿರುವ ಘಟನೆ ನಡೆದಿದೆ.

 

ಶೀಲಾ ಕೊಲೆಯಾದ ಮಹಿಳೆ. ಬನ್ನಿಕೋಡು ಗ್ರಾಮದ ರೋಡ್ ರೋಲರ್ ಆಪರೇಟರ್ ಆಗಿದ್ದ ಕೆಂಚಪ್ಪ ಎನ್ನುವರ ಜೊತೆ 9 ವರ್ಷಗಳ ಹಿಂದೆ ವಿವಾಹವಾಗಿತ್ತು. ಹರಿಹರ ತಾಲೂಕಿನ ವಾಸನ ಗ್ರಾಮದ ಶೀಲಾಳನ್ನು ಕೆಂಚಪ್ಪ ಪ್ರೀತಿಸಿದ್ದು, ಮನೆಯವರು ವಿರೋಧದ ನಡುವೆಯೂ ಮನೆಯಿಂದ ಓಡಿ ಬಂದು ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಹೇಗೋ ಸುಖವಾಗಿ ಸಂಸಾರ ಮಾಡಿ ಒಂದು ಮುದ್ದಾದ ಮಗುವನ್ನು ಪಡೆದಿದ್ದರು. ಆಗ ಕೆಂಚಪ್ಪನ ಅಸಲಿ ಸತ್ಯ ಗೊತ್ತಾಗಿದೆ..

ಕೆಂಚಪ್ಪನಿಗೆ ಈಗಾಗಲೇ ಮದುವೆಯಾಗಿದ್ದು, ಆಕೆಗೆ ಮಕ್ಕಳಿಲ್ಲ ಎನ್ನುವ ಕಾರಣಕ್ಕೆ ತನ್ನನ್ನು ಮದುವೆಯಾಗಿರುವುದು ಗೊತ್ತಾಗಿದೆ. ಪ್ರತಿನಿತ್ಯ ಜಗಳ ಶುರುವಾಗುತ್ತಿತ್ತು. ಕೆಂಚಪ್ಪ ಕೂಡ ಮದ್ಯ ಸೇವನೆ ಮಾಡಿ ರಾದ್ದಾಂತ ಮಾಡುತ್ತಿದ್ದ, ಇದು ಎರಡು ಮನೆಯವರಿಗೆ ಗೊತ್ತಾಗಿ ರಾಜೀ ಪಂಚಾಯತಿ ಮಾಡಿ ಹೋಗಿದ್ದರು. ಆದರೆ ಕಳೆದ ರಾತ್ರಿ ಮದ್ಯ ಸೇವನೆ ಮಾಡಿ ಬಂದ ಕೆಂಚಪ್ಪ ಹೆಂಡತಿಗೆ ಚಿಕನ್ ಅಡುಗೆ ಮಾಡಿಲ್ಲ ಎಂದು ಜಗಳವಾಡಿ ಕೊನೆಗೆ ಚಾಕುವಿನಿಂದ ಹಿರಿದು ಕೊಲೆ ಮಾಡಿದ್ದಾನೆ. ಈ ಕುರಿತು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

garudavoice21@gmail.com 9740365719

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!