ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ: ಎ.ಬಿ.ಎಂ ವಿಜಯಕುಮಾರ್
ದಾವಣಗೆರೆ: ನಾನು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಎಂದು ಹರಿಹರ ನಗರಸಭಾ ಸದಸ್ಯರಾದ ಎ.ಬಿ.ಎಂ. ವಿಜಯಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ನಾನು ಮತ್ತೆ ಬಿಜೆಪಿ ಸೇರಿದ್ದೇನೆ ಎಂಬುದು ಶುದ್ದ ಸುಳ್ಳಿನಿಂದ ಕೂಡಿದ್ದು, ಇಂತಹ ವದಂತಿಗಳನ್ನು ಯಾರು ನಂಬಬಾರದು ಎಂದು ತಮ್ಮ ಬೆಂಬಲಿಗರು ಮತ್ತು ಹಿತೈಷಿಗಳಿಗೆ ಮನವಿ ಮಾಡಿದ್ದಾರೆ.
ನಾನು ಇದೀಗ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು, ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರು ಮತ್ತು ಹಿತೈಷಿಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಅವರು ಕರೆ ನೀಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜನಪರ ಕೆಲಸಗಳು, ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರು ಜನರ ಸಂಕಷ್ಟಗಳಿಗೆ ಸ್ಪಂದಿಸುವ ರೀತಿ ಮತ್ತು ಅವರ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಬಿಡುವ ಚಿಂತನೆಯೇ ಇಲ್ಲ ಎಂದು ತಿಳಿಸಿದ್ದಾರೆ.