ಯತ್ನಾಳ್ ವಿಚಾರ ದೆಹಲಿಯವರಿಗೆ ತಿಳಿಸಿದ್ದೇನೆ: ಸಿಎಂ
ಬೀರೂರು: ಶಾಸಕ ಬಸವವಗೌಡ ಪಾಟೀಲ್ ಯತ್ನಾಳ್ ಅವರ ವಿಚಾರವನ್ನು ದೆಹಲಿಯವರಿಗೆ ತಿಳಿಸಿದ್ದೇನೆ. ಹೈಕಮಾಂಡ್‌ನವರು ಅವರನ್ನು ಕರೆಸಿ ಮಾತನಾಡಿ ಸರಿಪಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅತಿ ಉತ್ಸಾಹದ ಮಿತ್ರ. ಅವರು ಉತ್ಸಾಹದಲ್ಲಿ ಕೆಲ ಹೇಳಿಕೆ ನೀಡುತ್ತಾರೆ ಎಂದು ಬೊಮ್ಮಾಯಿ ಹೇಳಿದರು.
ಮೀಸಲಾತಿ ವಿಚಾರದಲ್ಲಿ ಗೊಂದಲಗಳಿಲ್ಲ. ಮಧ್ಯಂತರ ವರದಿಯನ್ನು ಸಚಿವ ಸಂಪುಟದ ಮುಂದೆ ಇಟ್ಟಿದ್ದೇವೆ. ಅಂತಿಮ ವರದಿ ನಂತರ ಸ್ಪಷ್ಟ ಚಿತ್ರಣ ಲಭಿಸುತ್ತದೆ’ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಹೇಳಿದರು.