ಸಿದ್ಧರಾಮಯ್ಯ ಕೋಲಾರದಿಂದ ಸ್ಪರ್ಧಿಸಲ್ಲ ಎಂದು ಮೊದಲೇ ಹೇಳಿದ್ದೆ: ಯಡಿಯೂರಪ್ಪ

ತಿಪಟೂರು: ಸಿದ್ದರಾಮಯ್ಯ ಅನಗತ್ಯವಾಗಿ ಓಡಾಡಿ, ಅಲ್ಲಿ, ಇಲ್ಲಿ ಎಂದು ಕಥೆ ಹೇಳುತ್ತಾರೆ. ಕೋಲಾರ, ಮತ್ತೊಂದು ಎಂದು ಹೇಳುವ ಅಗತ್ಯ ಇರಲಿಲ್ಲ. ಯಾಕೆ ಆ ರೀತಿ ಗೊಂದಲ ಮೂಡಿಸುತ್ತಾರೋ ಗೊತ್ತಿಲ್ಲ. ನನ್ನ ಪ್ರಕಾರ ವರುಣಾದಲ್ಲೇ ನಿಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಈ ಹಿಂದಿಯೇ ಹೇಳಿದ್ದೆ. ಆ ಮಾತು ನಿಜ ಆಗಬಹುದು. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಗೊತ್ತಾಗಲಿದೆ ಯಡಿಯೂರಪ್ಪ ಹೇಳಿದರು.
ಕಂದಾಯ ಸಚಿವ ಆರ್.ಅಶೋಕ, ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸುವುದಿಲ್ಲ. ಈಗಾಗಲೇ ಅಲ್ಲಿ ಉರಿಗೌಡ, ನಂಜೇಗೌಡ ವಿಚಾರ ಹೊತ್ತಿಕೊಂಡಿದೆ. ಕೋಲಾರದಲ್ಲಿ ಒಕ್ಕಲಿಗರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಅಲ್ಲಿ ಸೋಲುವ ಭಯದಿಂದ ಸ್ಪರ್ಧೆ ಮಾಡುತ್ತಿಲ್ಲ ಎಂದು ಹೇಳಿದರು.