ನನಗೆ ಜಿಲ್ಲಾ ಮಂತ್ರಿ ಸ್ಥಾನ ಸಿಗಲಿದೆ: ಶಾಸಕ ರವೀಂದ್ರನಾಥ
![IMG-20220103-WA0029](https://garudavoice.com/wp-content/uploads/2022/01/IMG-20220103-WA0029.jpg)
ದಾವಣಗೆರೆ: ಜಿಲ್ಲಾ ಉಸ್ತುವಾರಿ ಮಂತ್ರಿ ಸ್ಥಾನ ನನ್ನನ್ನು ಬಿಟ್ಟು ಇನ್ನಾರಿಗೆ ಕೊಡುತ್ತಾರೆ ಹೇಳಿ? ನಾನೆ ಇಲ್ಲಿ ಹಿರಿಯ ಶಾಸಕನಾಗಿದ್ದು ನನ್ನನ್ನೆ ಪರಿಗಣಿಸುತ್ತಾರೆ ಎಂದು ಶಾಸಕ ಎಸ್.ಎ. ರವೀಂದ್ರನಾಥ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡುವುದಾದರೆ ನನಗೇ ಮಂತ್ರಿ ಸ್ಥಾನ ನೀಡಬೇಕು ಎಂದರು.
ಸಚಿವ ಸಂಪುಟದಲ್ಲಿ ಸ್ಥಾನ ನೀಡಲಿ, ಬಿಡಲಿ ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ. ಒಂದು ವೇಳೆ ಜಿಲ್ಲೆಗೆ ಪ್ರಾತಿನಿಧ್ಯ ನೀಡುವುದಾದರೆ ನನಗೇ ಸಚಿವ ಸ್ಥಾನ ನೀಡಬೇಕು. ಬೇರೆಯವರಿಗೆ ನೀಡಲು ಬರುವುದಿಲ್ಲ ಎಂದು ಹೇಳಿದರು.