ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ ಇದು ಡಿಕೆಶಿ ಕವಿತೆ

ಡಿಕೆಶಿ
ಮಂಡ್ಯ: ಮದ್ದೂರು ಪಟ್ಟಣದಲ್ಲಿ ಶನಿವಾರ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅದ್ಭುತವಾದ ಕವಿತೆಯೊಂದನ್ನು ವಾಚಿಸಿದ್ದಾರೆ.
ಅವರ ಕವಿತೆ ಹೀಗಿದೆ. `ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ. ದಾನ, ಧರ್ಮ ಮಾಡಿರುವ ಕೈ ಅಧಿಕಾರಕ್ಕೆ ಬಂದರೆ ಚೆಂದ’
‘ಎಚ್.ಡಿ.ಕುಮಾರಸ್ವಾಮಿಗೆ ಅಧಿಕಾರ ಕೊಟ್ಟಿದ್ದೀರಿ, ನಾನೂ ನಿಮ್ಮ ಮನೆಯ ಮಗ. ನನಗೂ ಒಮ್ಮೆ ಅಧಿಕಾರ ಕೊಡಿ, ನನ್ನ ಅಧಿಕಾರವನ್ನೂ ಒಂದು ಬಾರಿ ನೋಡಿ’
ಎಂದು ವಾಟ್ಸ್ ಆಪ್‌ನಲ್ಲಿ ಬಂದಿದ್ದ ಕವಿತೆಯನ್ನು ವಾಚಿಸುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
ಮುಂದುವರಿದು ಮಾತನಾಡಿರುವ ಅವರು, ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಸುತ್ತೇವೆ. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ನನ್ನ ನಾಯಕತ್ವಕ್ಕೆ ಜನರು ಆಶೀರ್ವಾದ ಮಾಡಬೇಕು ಎಂದರು.