252 ಮೆಟ್ರಿಕ್ ಟನ್ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಎತ್ತುವಳಿ

ದಾವಣಗೆರೆ: ಹಾವೇರಿ ತಾಲ್ಲೂಕು ಬೇಲೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 252 ಮೆಟ್ರಿಕ್ ಟನ್ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಶುಕ್ರವಾರ ಎತ್ತುವಳಿ ಮಾಡಿದ್ದಾರೆ.

ಹೀಲದಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು ಚೀಲೂರು ಪಿಡಿಒ ಹಾಗೂ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ, ಪರಿಶೀಲಿಸಿ ಜಪ್ತು ಮಾಡಿ ವಶಕ್ಕೆ ಪಡೆದು ಒಟ್ಟು 18 ಲಾರಿಗಳಲ್ಲಿ ವಿವಿಧ ಸರ್ಕಾರಿ ಕಾಮಗಾರಿಗಳಿಗೆ ಅಂದಾಜು 252 ಮೆಟ್ರಿಕ್ ಟನ್‌ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನಧಿಕೃತ ಮರಳನ್ನು ಎತ್ತುವಳಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!