ಅನಾರೋಗ್ಯ: ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯದಿಂದಾಗಿ ಬಿಜೆಪಿ ನಾಯಕಿ, ಹಿರಿಯ ನಟಿ ಖುಷ್ಬೂ ಸುಂದರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ. ಖುಷ್ಬೂ ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.
ಆಸ್ಪತ್ರೆಯಲ್ಲಿರುವ ಕೆಲ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ದೇಹದಲ್ಲಿ ತೀವ್ರ ನೋವು ಹಾಗೂ ನಿಶಕ್ತಿ ಕಾಡುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ತೀವ್ರ ಜ್ವರ ಇದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ, ಎರಡು ಮೂರು ದಿನಗಳಲ್ಲಿ ಜ್ಚರ ಕಡಿಮೆಯಾಗಿ ಆರೋಗ್ಯ ಸುಧಾರಿಸಲಿದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಖುಷ್ಬೂ ತಿಳಿಸಿದ್ದಾರೆ.
ಸಿನಿಮಾ ಸೆಲೆಬ್ರಿಗಳು ಹಾಗೂ ರಾಜಕಾರಣಿಗಳು ಬೇಗ ಗುಣಮುಖರಾಗಲಿ ಎಂದು ವಿಶ್ ಮಾಡಿದ್ದಾರೆ.