ಅಡಿಕೆ ನಾಡು ಚನ್ನಗಿರಿಯ ಕಮಲಪಾಳಯದಲ್ಲಿ ಈಗ ಬೂದಿ ಮುಚ್ಚಿದ ಕೆಂಡ.! ಟಿಕೆಟ್ ಟಿಕೆಟ್.!

ಚನ್ನಗಿರಿ: ಕೆಲ ತಿಂಗಳ ಹಿಂದೆ ಅಡಿಕೆ ನಾಡಿನ ಚನ್ನಗಿರಿಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರೇ ಹೈಕಮಾಂಡ್ ಆಗಿದ್ದರು..ಯಾವಾಗ ಮಾಡಾಳ್ ವಿರುದ್ಧ ಲಂಚದ ಆರೋಪ ಬಂತೋ..ಅಂದಿನಿಂದ ಬಿಜೆಪಿಯಲ್ಲಿ ಎರಡು ಬಣ ಶುರುವಾಯಿತು.
ಮೊದಲ ಭಾಗವಾಗಿ ಚನ್ನಗಿರಿಯಲ್ಲಿ ನಡೆದ ಬಿಜೆಪಿ ಸಂಕಲ್ಪಯಾತ್ರೆಯಲ್ಲಿ ನಡೆದ ಗಲಾಟೆ…ಮಾಡಾಳ್ ವಿರೂಪಾಕ್ಷಪ್ಪ ಲಂಚದ ಪ್ರಕರಣದಲ್ಲಿ ಎ1 ಆರೋಪಿಯಾದ ಬಳಿಕ ಚನ್ನಗಿರಿ ಬಿಜೆಪಿಯಲ್ಲಿ ಇನ್ನೊಂದು ಬಣ ಶುರುವಾಯಿತು..ಅದರಲ್ಲಿ ತುಮ್ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್.ಶಿವಕುಮಾರ್ ಬಣ ಕೂಡ ಒಂದು. ಅಂತೆಯೇ ಮಾಡಾಳ್ ಮಲ್ಲಿಕಾರ್ಜುನ್ ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಘಿ.. ಈ ನಡುವೆ ರುದ್ರೇಗೌಡ, ಡಾ.ಸರ್ಜಿ ಕೂಡ ಆಕಾಂಕ್ಷಿಗಳು ಒಬ್ಬರು.
ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿಯಿಂದ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದ್ದುಘಿ, ಇವರಿಬ್ಬರ ಕಿತ್ತಾಟ ಇಲ್ಲಿ ಬಹಿರಂಗಗೊಂಡಿತು. ಪರಿಣಾಮ ವಿಜಯ ಸಂಕಲ್ಪ ಯಾತ್ರೆ ಅರ್ಧಕ್ಕೆ ಮೊಟಕುಗೊಂಡಿತು. ಇನ್ನು ಆರೋಪಿ ಸ್ಥಾನದಲ್ಲಿರುವ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ಅನುಮಾನವಾಗಿದೆ. ಆದ್ದರಿಂದ ಇದೇ ಕ್ಷೇತ್ರದಿಂದ ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ಎಚ್.ಎಸ್. ಶಿವಕುಮಾರ್ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪ್ರಮುಖರಾಗಿ ಕಾಣಿಸಿಕೊಂಡಿದ್ದಾರೆ. ಇದನ್ನು ಮಾಡಾಳು ವಿರುಪಾಕ್ಷಪ್ಪ ಅಭಿಮಾನಿಗಳ ಬಣ ವಿರೋಧಿಸಿದೆ. ಅಲ್ಲದೇ ಚನ್ನಗಿರಿ ವಿಜಯಸಂಕಲ್ಪ ಯಾತ್ರೆಗೆ ಮಾಡಾಳು ಕುಟುಂಬ ನೇತೃತ್ವ ವಹಿಸುವಂತೆ ಬೆಂಬಲಿಗರು ಒತ್ತಾಯ ಮಾಡಿದಾಗ ಮಾತಿನ ಚಕಮಕಿ ನಡೆದಿದೆ.
ಈ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹಾಗೂ ಶಾಸಕ ರೇಣುಕಾಚಾರ್ಯ ಯಿದ್ದ ವಾಹನ ಅದ್ಧೂರಿ ಮೆರವಣಿಗೆಯಲ್ಲಿ ಸಾಗುತ್ತಿತ್ತು. ಆದರೆ, ಯಾತ್ರೆಯು ಚನ್ನಗಿರಿ ಪಟ್ಟಣ ಬಸ್ ಸ್ಟ್ಯಾಂಡ್ ಮುಂಭಾಗ ಆಗಮಿಸುತ್ತಿದ್ದಂತೆ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಬಣ ಹಾಗೂ ಎಚ್.ಎಸ್.ಶಿವಕುಮಾರ್ ಬಣದ ನಡುವೆ ವಾಗ್ವಾದ ಶುರುವಾಗಿದೆ. ಈ ಸಂದರ್ಭದಲ್ಲಿ ಹೊಸ ಬಿಜೆಪಿ ಟಿಕೆಟ್ ಆಕಾಂಕ್ಷಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಎಚ್.ಎಸ್. ಶಿವಕುರ್ಮಾ ಅವರು ವಿಜಯ ಸಂಕಲ್ಪ ಯಾತ್ರೆ ವಾಹನಕ್ಕೆ ಹತ್ತಲು ಹೋಗಿದ್ದಾರೆ. ಈ ವೇಳೆ ಮಾಡಾಳ್ ಪುತ್ರ ಮಲ್ಲಿಕಾರ್ಜುನ ಹಾಗೂ ಅವರ ಬೆಂಬಲಿಗರು ಯಾತ್ರೆಯ ವಾಹನಕ್ಕೆ ಹತ್ತಿಸಿಕೊಳ್ಳಲಿಲ್ಲ. ಆಗ ಎರಡೂ ಬಣದ ಅಭಿಮಾನಿಗಳ ನಡುವೆ ವಾಗ್ವಾದ ನಡೆದಿದೆ. ಅಲ್ಲದೇ ವಾಹನದಲ್ಲಿದ್ದ ನಾಯಕರಿಗೂ ಬೆಂಬಲಿಗರು ತರಾಟೆ ತೆಗೆದುಕೊಂಡಿದ್ದಾರೆ.
ಇನ್ನು ದಾವಣಗೆರೆ ಎಂಪಿ ಜಿ.ಎಂ. ಸಿದ್ದೇಶ್ವರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರ ಮಾತನ್ನು ಯಾವೊಬ್ಬ ಕಾರ್ಯಕರ್ತರೂ ಆಲಿಸಲಿಲ್ಲಘಿ. ಅಲ್ಲದೇ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಕಾರ್ಯಕರ್ತರನ್ನು ಸಮಾಧಾನ ಮಾಡಲು ಮುಂದಾದರೂ ಅವರನ್ನೇ ನೂಕಾಟ- ತಳ್ಳಾಟದ ನಡುವೆ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಅರಿತ ಪೊಲೀಸರು, ಮುಖಂಡರುಗಳ ಜತೆ ಮಾತನಾಡಿ ಶಿವಕುಮಾರ್ ಮತ್ತು ಅವರ ಬೆಂಬಲಿಗರನ್ನು ಪ್ರವಾಸಿ ಮಂದಿರಕ್ಕೆ ಹಾಗೂ ಮಾಡಾಳ್ ಮಲ್ಲಿಕಾರ್ಜುನ್, ಬೆಂಬಲಿಗರನ್ನು ಬಿಜೆಪಿ ಕಚೇರಿಗೆ ಕಳುಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಎಸ್.ಶಿವಕುಮಾರ್, ಬಿಜೆಪಿಯವರೇ ವಿಜಯ ಸಂಕಲ್ಪ ಯಾತ್ರೆಯಲ್ಲಿ ಎಲ್ಲರೂ ಸೇರಿ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆವು. ಆದರೆ, ನಾವು ಶುಭಾಶಯ ಕೋರಿ ಹಾಕಿದ್ದ ್ಲ್ಲೆಕ್ಸ್‌ಗಳನ್ನು ಕಿತ್ತು ಹಾಕಿದ್ದಾರೆ. ನಾನು ಬಿಜೆಪಿ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದು ಪಕ್ಷ ಯಾರಿಗೆ ಟಿಕೆಟ್ ನೀಡಲಿ ಎಲ್ಲರೂ ಒಟ್ಟಾಗಿ ಬಿಜೆಪಿಯನ್ನು ಗೆಲ್ಲಿಸುವುದು ಮುಖ್ಯ ಗುರಿಯಾಗಿದೆ. ಆದರೆ ಈ ರೀತಿ ಮಾಡುವುದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ವಿಜಯಸಂಕಲ್ಪ ಯಾತ್ರೆಯನ್ನು ಬಸ್ ನಿಲ್ದಾಣದ ಬಳಿ ಮೊಟಕುಗೊಳಿಸಿ ಬಿಜೆಪಿ ರಾಜ್ಯ ಮುಖಂಡರು ಹೊಳಲ್ಕೆರೆಯಲ್ಲಿ ನಡೆಯುವ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ತೆರಳಿದರು.
ಒಟ್ಟಾರೆ ಚನ್ನಗಿರಿ ವಿಧಾನಸಭಾ ಕ್ಷೇತ್ರ ರಾಜ್ಯದ ಹೈವೋಲ್ಟೆಜ್ ಕ್ಷೇತ್ರವಾಗಿ ಹೊರಹೊಮ್ಮಿದ್ದು, ಈ ಹಿಂದೆ ನಡೆದ ಬೆಳವಣಿಗೆಯಿಂದ ಪಕ್ಷದಲ್ಲಿ ಈ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವ ಆಕಾಂಕ್ಷಿಗಳಲ್ಲಿ ಪೈಪೋಟಿ ಆರಂಭವಾಗಿದೆ. ಕ್ಷೇತ್ರದ ಅಲಲ್ಲಿಯೇ ಆರಂಭವಾಗಿದ್ದ ಆಂತರಿಕ ಕದನ ಮತದಾರರ ಎದುರು ಸ್ಟೋಟಗೊಂಡಿತು. ಇದಕ್ಕೆ ವಿಜಯ ಸಂಕಲ್ಪ ಯಾತ್ರೆ ಸಾಕ್ಷಿಯಾಯಿತು.