ದಾವಣಗೆರೆ ವಿ.ವಿ ವಿದ್ಯಾರ್ಥಿಕೂಟ ಉದ್ಘಾಟನೆ
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯ ವಿದ್ಯಾರ್ಥಿಕೂಟ (ಜಿಮ್ಖಾನಾ)ದ ಉದ್ಘಾಟನಾ ಸಮಾರಂಭವನ್ನು ಜುಲೈ 7ರಂದು ಏರ್ಪಡಿಸಲಾಗಿದೆ.
ವಿಶ್ವವಿದ್ಯಾಲಯದ ಎಂಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಸಿ ಉದ್ಘಾಟಿಸುವರು. ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸುವರು. ಕುಲಸಚಿವೆ ಸರೋಜಾ ಬಿ.ಬಿ., ಪರೀಕ್ಷಾಂಗ ಕುಲಸಚಿವ ಡಾ.ಕೆ.ಶಿವಶಂಕರ, ಹಣಕಾಸು ಅಧಿಕಾರಿ ಡಿ.ಪ್ರಿಯಾಂಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕ ಪ್ರೊ.ಯು.ಬಿ.ಮಹಾಬಲೇಶ್ವರ, ವಿದ್ಯಾರ್ಥಿ ಕೂಟದ ಉಪಾಧ್ಯಕ್ಷ ಡಾ.ಅಶೋಕಕುಮಾರ ಪಾಳೇದ, ಡಾ.ಶಾರದಾದೇವಿ ಕಳ್ಳಿಮನಿ ಉಪಸ್ಥಿತರಿರುವರು ಎಂದು ವಿದ್ಯಾರ್ಥಿ ಕೂಟದ ಅಧ್ಯಕ್ಷ ಪ್ರೊ.ಆರ್.ಶಶಿಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವನಮಹೋತ್ಸವ ಕಾರ್ಯಕ್ರಮ ಇಂದು
ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟಿçಯ ಸೇವಾ ಯೋಜನೆ ಹಾಗೂ ವಿವಿ ತೋಟಗಾರಿಕೆ ವಿಭಾಗದ ವತಿಯಿಂದ ಜುಲೈ ೭ರಂದು ವನಮಹೋತ್ಸವ-೨೦೨೩ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣದಲ್ಲಿ ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಸಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡುವರು. ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವೆ ಸರೋಜ ಬಿ.ಬಿ., ಪರೀಕ್ಷಾಂಗ ಕುಲಸಚಿವ ಡಾ.ಕೆ.ಶಿವಶಂಕರ, ಹಣಕಾಸು ಅಧಿಕಾರಿ ಡಿ.ಪ್ರಿಯಾಂಕ ಭಾಗವಹಿಸುವರು ಎಂದು ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಅಶೋಕಕುಮಾರ ವಿ.ಪಾಳೇದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.