ದಾವಣಗೆರೆಯಲ್ಲಿ ಮಕ್ಕಳ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರ ಉದ್ಘಾಟನೆ!
ದಾವಣಗೆರೆ : ಅಪೌಷ್ಠಿಕತೆ ಮಕ್ಕಳನ್ನು ಗುರುತಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (ಮಕ್ಕಳ ಆರೋಗ್ಯ ಪುನಶ್ಚೇತನ ಕೇಂದ್ರ) ಕಳುಹಿಸಿಕೊಡಬೇಕು ಇಲ್ಲಿ ಮಕ್ಕಳಿಗೆ ಜೀರ್ಣವಾಗುವಂತ ಪೌಷ್ಠಿಕ ಆಹಾರವನ್ನು ಸಿದ್ಧಪಡಿಸಿ ಮಕ್ಕಳಿಗೆ ನೀಡಲಾಗುತ್ತದೆ ಎಂದು ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಶಾಸಕರು ಪ್ರೋ.ಲಿಂಗಣ್ಣ, ಕರೆ ನೀಡಿದರು.
ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರವನ್ನು ಉದ್ಘಾಟಿಸಿ ಮಾತಾನಾಡಿದ ಅವರು ಮಾಯಕೊಂಡ ಗ್ರಾಮದ ಸುತ್ತಮುತ್ತಲಿನ ಅಂಗನವಾಡಿ ಕೇಂದ್ರದವರು ಇದರಿಂದ ಅಪೌಷ್ಠಿಕತೆಯನ್ನು ಹೋಗಲಾಡಿಸಿ ಮಕ್ಕಳ ಉತ್ತಮ ಬೆಳಗವಣಿಗೆಗೆ ಸಹಕಾರವನ್ನು ನೀಡಬೇಕೆಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ನಾಗರಾಜ್ ಮಾತನಾಡಿ ತಾಲ್ಲೂಕು ಕೇಂದ್ರದಲ್ಲಿ ಬಿಟ್ಟರೆ, ಮಾಯಕೊಂಡದಲ್ಲಿ ಪೌಷ್ಟಿಕ ಆಹಾರ ಪುನಶ್ಚೇತನ ಕೇಂದ್ರದ ಉದ್ಘಾಟನೆಯಿಂದ ಸುತ್ತಮುತ್ತಲಿನ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಅಪೌಷ್ಠಿಕ ಮಕ್ಕಳನ್ನು ಗುರುತಿಸಿ (0-5 ವರ್ಷದ ಮಕ್ಕಳು) ಮಕ್ಕಳ ಆರೋಗ್ಯ
ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿಕೊಡಬೇಕೆಂದು ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್.ಎಲ್.ಡಿ. ಇವರು ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಯಕೊಂಡ ಸುತ್ತಮುತ್ತಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ಕೊಡಗೂರು, ನಲ್ಕುಂದ, ನೇರ್ಲಿಗೆ, ಹುಚ್ಚವ್ವನಹಳ್ಳಿ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳಲು ಸೂಚಿಸಿದರು. ಈ ಕಾರ್ಯಕ್ರಮದಲ್ಲಿ ಆರ್.ಸಿ.ಹೆಚ್.ಅಧಿಕಾರಿ ಡಾ. ಮೀನಾಕ್ಷಿ ಆಡಳಿತ ವೈದ್ಯಾಧಿಕಾರಿ ಡಾ.ಗೋವಿಂದ್‍ರಾಜ್, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಯಕೊಂಡ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿಗಳು ಡಾ.ಸುರೇಶ್‍ಬಾರ್ಕಿ , ಜಿಲ್ಲಾ ಆರೋಗ್ಯ ಮೇಲ್ಚಿಚಾರಕರು ಹೊರಕೇರಿ.ಎಂ.ವಿ., ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಉಮಾಪತಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಾಯತ್ರಮ್ಮ, ಪ್ರಾ.ಆ.ಕೇಂದ್ರ ಮಾಯಕೊಂಡ, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಈಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
garudavoice21@gmail.com 9740365719