ವೀರಶೈವ ಜಂಗಮ ಅರ್ಚಕರ ಹಾಗೂ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ “ಗುರುಕುಲ ಕಟ್ಟಡ” ಲೋಕಾರ್ಪಣೆ

ವೀರಶೈವ ಜಂಗಮ ಅರ್ಚಕರ
ಶಿವಮೊಗ್ಗ: ಜಿಲ್ಲಾ ವೀರಶೈವ ಜಂಗಮ ಅರ್ಚಕರ ಹಾಗೂ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘ(ರಿ.)ದ ವತಿಯಿಂದ ನಗರದ ಸೋಮಿನಕೊಪ್ಪ ರಸ್ತೆಯಲ್ಲಿರುವ ಜೆ.ಎಚ್. ಪಟೇಲ್ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ನೂತನ “ಗುರುಕುಲ ಕಟ್ಟಡ” ಲೋಕಾರ್ಪಣೆ ಸಮಾರಂಭದಲ್ಲಿ ಶ್ರೀ ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷರಾದ ಶ್ರೀ ಎಸ್.ಎಸ್. ಜ್ಯೋತಿಪ್ರಕಾಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಕಾಶಿ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ|| ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಆನಂದಪುರ ಶ್ರೀ ಮುರುಘಾರಾಜೇಂದ್ರ ಮಹಾಸಂಸ್ಥಾನ ಮಠದ ಪರಮ ಪೂಜ್ಯರಾದ ಶ್ರೀ ಶ್ರೀ ಶ್ರೀ ಡಾ|| ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಟೇಪ್ ಕತ್ತರಿಸಿ ದೀಪ ಬೆಳಗಿಸುವ ಮೂಲಕ ಕಟ್ಟಡ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರು, ಶಾಸಕರಾದ ಶ್ರೀ ಕೆ.ಎಸ್. ಈಶ್ವರಪ್ಪ ಅವರು, ವಿಧಾನ ಪರಿಷತ್ ಶಾಸಕರಾದ ಶ್ರೀ ಆಯನೂರು ಮಂಜುನಾಥ್ ಅವರು, ಪುರೋಹಿತರ ಸಂಘದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಅವರು, ಮಲ್ಲಿಕಾರ್ಜುನ ದೇವಸ್ಥಾನದ ಅಧ್ಯಕ್ಷರಾದ ಶ್ರೀ ವೀರಣ್ಣ ಅವರು, ಜಂಗಮ ಸಮಾಜದ ಅಧ್ಯಕ್ಷರಾದ ಶ್ರೀ ಚಂದ್ರಯ್ಯ ಅವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.