ಜಿಎಂಐಟಿಯಲ್ಲಿ ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ ಉದ್ಘಾಟನೆ

ಜಿಎಂಐಟಿಯಲ್ಲಿ ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ ಉದ್ಘಾಟನೆ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ ದಿನಾಂಕ 17ನೇ ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ಆಡಳಿತ ಸೇವೆ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಎಂಐಟಿಯಲ್ಲಿ ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ ಉದ್ಘಾಟನೆ

ಈ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಜಿಎಂಐಟಿ ಎಂಬಿಎ ವಿಭಾಗ ಹಮ್ಮಿಕೊಂಡಿತ್ತು.

9 ದಿನಗಳ ಈ ತರಬೇತಿ ಕಾರ್ಯಕ್ರಮಕ್ಕೆ ವಿವಿಧ ವಿಷಯವಾರು ಪರಿಣಿತ ತಜ್ಞರುಗಳು ಆಗಮಿಸಲಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ತರಬೇತಿಯನ್ನು ಕೊಡಲಿದ್ದಾರೆ ಎಂದು ದಾವಣಗೆರೆ ವಿಭಾಗದ ಉದ್ಯೋಗ ಅಧಿಕಾರಿ ಶ್ರೀ ರವೀಂದ್ರ ಡಿ ತಿಳಿಸಿದರು.

ಜಿಎಂಐಟಿಯಲ್ಲಿ ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ ಉದ್ಘಾಟನೆ

ಕಾರ್ಯಕ್ರಮದ ಉದ್ಘಾಟನೆಯನ್ನು ದಾವಣಗೆರೆ ವಿಭಾಗದ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀ ಬಸನಗೌಡ ನೆರವೇರಿಸಿ ಮಾತನಾಡಿದರು. ಚಲವೊಂದಿದ್ದರೆ ಏನು ಬೇಕಾದರೂ ಸಾಧಿಸಬಹುದೆಂದು ಕೆಲವು ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ಈ 9 ದಿನಗಳ ತರಬೇತಿ ಕಾರ್ಯಕ್ರಮವನ್ನು ನಿಷ್ಠೆ ಮತ್ತು ಶ್ರದ್ಧೆಯಿಂದ ಭಾಗವಹಿಸಿ ಮುಂಬರುವ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಉತ್ತೀರ್ಣರಾಗಬೇಕೆಂದು ಕರೆಕೊಟ್ಟರು.

ಜಿಎಂಐಟಿಯಲ್ಲಿ ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ ಉದ್ಘಾಟನೆ

ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಮಾತನಾಡಿ, ಕಾಲೇಜಿನಲ್ಲಿರುವ ಮೂಲಸೌಕರ್ಯಗಳನ್ನು ಉಪಯೋಗಿಸಿಕೊಂಡು ಈ ತರಬೇತಿ ಕಾರ್ಯಕ್ರಮದ ಯಶಸ್ವಿಗೆ ಕಾರಣೀಭೂತರಾಗಬೇಕೆಂದು ತಿಳಿಸಿದರು. ತರಬೇತಿಗೆ ಮತ್ತು ಮುಂಬರುವ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ಕೋರಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಅಧಿಕಾರಿ ವೈಯು ಸುಭಾಷ್ ಚಂದ್ರ, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ ಬಸವರಾಜು ಪಿ ಎಸ್, ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್, ವಿಭಾಗದ ಮುಖ್ಯಸ್ಥರುಗಳು, ಅಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!