ಜಿಎಂಐಟಿಯಲ್ಲಿ ಪೇಪಾಲ್ ಕಂಪನಿಯ ಶ್ರೇಷ್ಠತೆಯ ಕೇಂದ್ರದ ಉದ್ಘಾಟನಾ ಸಮಾರಂಭ

ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ ಐ ಸಿ ಟಿ ಅಕ್ಯಾಡೆಮಿ ವತಿಯಿಂದ ಪೇಪಾಲ್ ಕಂಪನಿಯ ಶ್ರೇಷ್ಠತೆಯ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಜಿಎಂಹಾಲಮ್ಮ ಸಭಾಂಗಣದಲ್ಲಿ ನೆರವೇರಿಸಲಾಯಿತು.


ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಗಣ್ಯ ಅತಿಥಿಗಳು ಸೇರಿದಂತೆ ಎಲ್ಲಾ ಹಾಜರಿದ್ದವರಿಗೆ ಆತ್ಮೀಯ ಸ್ವಾಗತದೊಂದಿಗೆ ಉದ್ಘಾಟನಾ ಸಮಾರಂಭವು ಪ್ರಾರಂಭವಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಮಾತನಾಡಿ, ನುರಿತತಜ್ಞರುಗಳು ತರಬೇತಿ ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆಕೊಟ್ಟರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಐ ಸಿ ಟಿ ಅಕ್ಯಾಡೆಮಿಯ ಸಹಾಯಕ ಮುಖ್ಯ ವ್ಯವಸ್ಥಾಪಕರಾದ ಶ್ರೀ ವಿಷ್ಣು ಪ್ರಸಾದ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಒಟ್ಟು 110 ವಿದ್ಯಾರ್ಥಿನಿಯರು ವಿವಿಧ ವಿಭಾಗಗಳಿಂದ ಹೆಸರನ್ನು ನೋಂದಾಯಿಸಿದ್ದು, 100 ಘಂಟೆಗಳುಸೈಬರ್ ಸೆಕ್ಯೂರಿಟಿ ಮತ್ತು40ಘಂಟೆಗಳು ಸಾಫ್ಟ್ ಸ್ಕಿಲ್ಸ್ ತರಬೇತಿ ಸಂಪೂರ್ಣ ಆಫ್ಲೈನ್ ಕಾರ್ಯಕ್ರಮವಾಗಿದ್ದು, ತಜ್ಞ ತರಬೇತುಧಾರರಿಂದ ತರಬೇತಿ ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.


ಜಿಎಂಐಟಿ ಕಾಲೇಜು ವಿವಿಧ ಪ್ರತಿಷ್ಠಿತ ಕಂಪನಿಗಳೊಡನೆ ಒಡಂಬಡಿಕೆಯನ್ನು ಮಾಡಿಕೊಂಡಿದ್ದು,. ಆ ಮೂಲಕ ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಕೈಗಾರಿಕಾ ತರಬೇತಿಯನ್ನು ನೀಡುತ್ತಿದ್ದು,ಪಠ್ಯದ ಜೊತೆಗೆ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿಯನ್ನು ಹೆಚ್ಚಿಸುತ್ತಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಐಸಿಟಿ ಅಕ್ಯಾಡೆಮಿ ದಾವಣಗೆರೆ ವಿಭಾಗದ ಸಂಯೋಜಕರಾದ ಶ್ರೀ ಜಕಾವುಲ್ಲ, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ ಬಿ ಎನ್ ವೀರಪ್ಪ, ವಿಭಾಗದ ಪ್ಲೇಸ್ಮೆಂಟ್ ಸಂಯೋಜಕರಾದ ಪ್ರೊ ಕಾವ್ಯಶ್ರೀ ಮತ್ತು ವಿವಿಧ ವಿಭಾಗಗಳ ಅಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!