ಹಮಾಲರಿಗಾಗಿ ನಿರ್ಮಿಸಿರುವ ವಸತಿ ಗೃಹಗಳ ಲೋಕಾರ್ಪಣೆ
ದಾವಣಗೆರೆ: ಜಿಲ್ಲಾ ಕೃಷಿ ಮಾರುಕಟ್ಟೆ ಸಮಿತಿಯಿಂದ 2017-18, 2018-19 ಮತ್ತು 2019-20 ನೇ ಸಾಲಿನ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಬೋರಗೊಂಡನಹಳ್ಳಿ ಎಚ್ ಗಿರಿಯಾಪುರ ಗ್ರಾಮದಲ್ಲಿ ಸಮಿತಿಯಿಂದ ಲೈಸೆನ್ಸ್ ಪಡೆದು ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಹಮಾಲರಿಗೆ ನಿರ್ಮಿಸಿರುವ ಜಿ+1 ಮಾದರಿಯ 60 ಗೃಹಗಳು ಮತ್ತು ಜಿ+2 ಮಾದರಿಯ 62 ವಸತಿ ಗೃಹಗಳನ್ನು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜರವರು ಉದ್ಘಾಟಿಸಿ ಲೋಕಾರ್ಪಣೆ ಮಾಡಿದರು.
ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಫ್ರೋ ಎನ್ ಲಿಂಗಣ್ಣ ಅಧ್ಯಕ್ಷತೆ ವಹಿಸಿದ್ದರು. ದಾವಣಗೆರೆ ಲೋಕಾಸಭಾ ಕ್ಷೇತ್ರದ ಸಂಸದರಾದ ಜಿ. ಎಮ್ ಸಿದ್ದೇಶ್ವರ, ಜಿಲ್ಲಾಧಿಕಾರಿಗಳಾದ ಶಿವಾನಂದ ಕಾಪಶಿ, ಜಿ.ಪಂ ಮುಖ್ಯ ಕಾರ್ಯ ನಿರ್ವಹಕ ಅಧಿಕಾರಿ ಡಾ. ಎ. ಚನ್ನಪ್ಪ , ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್, ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಯ ಕಾರ್ಯದರ್ಶಿ ಕೆ.ಸಿ ದೊರೆಸ್ವಾಮಿ ಉಪಸ್ಥಿತರಿದ್ದರು.