ಹೊನ್ನಾಳಿಯಲ್ಲಿ ಕಂದಾಯ ಉಪವಿಭಾಗಾಧಿಕಾರಿಗಳ ಕಚೇರಿ ಉದ್ಘಾಟನೆ

ದಾವಣಗೆರೆ : ಹೊನ್ನಾಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಂದಾಯ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ಕಂದಾಯ ಸಚಿವ ಆರ್. ಅಶೋಕ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ದಿನಾಂಕ 28ರಂದು ಸೋಮವಾರ ಬೆಳಿಗ್ಗೆ ಉದ್ಘಾಟಿಸಿದರು.
ಈ ವೇಳೆ ಸಂಜೀವಿನಿ ಯೋಜನೆಯಡಿಯಲ್ಲಿ ಸ್ತಿçà ಶಕ್ತಿ ಸಂಘಗಳಿಗೆ ಸುತ್ತುನಿಧಿ ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಸಚಿವದ್ವಯರು ವಿತರಣೆ ಮಾಡಿದರು. ತದನಂತರ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಡಿ.ಎಸ್. ಅರುಣ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್, ಹೊನ್ನಾಳಿ ತಾಲೂಕಿನ ಜನಪ್ರತಿನಿಧಿಗಳು ಸೇರಿದಂತೆ ಅನೇಕ ಜನರು ಇದ್ದರು.