ಗಲಭೆಗೆ ಪ್ರಚೋದನೆ: ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್
ಬೆಂಗಳೂರು: ಕೋಮು ದ್ವೇಷ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್‌ಐಆರ್ ದಾಖಲಾಗಿದೆ.
‘ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ’ ಎಂದು ಕೋಮು ದ್ವೇಷದ ಹೇಳಿಕೆ ನೀಡಿ ಆ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಅಧಿಕಾರಿ ಮನೋಜ್‌ಕುಮಾರ್ ದೂರು ನೀಡಿದ್ದರು.