ರಾಜ್ಯದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ.! ಹೊಸ ಮಾರ್ಗಸೂಚಿ ಬಿಡುಗಡೆ.!

ಬೆಂಗಳೂರು: ಕೋವಿಡ್ 19 ಪ್ರಕರಣಗಳು ಹೆಚ್ಚಳವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಆಯುಕ್ತರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ರಾಜ್ಯದಲ್ಲಿ ನೂತನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಆದೇಶ ಹೊರಡಿಸಲಾಗಿದೆ.

ಪ್ರಸ್ತುತ, ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್ 19 Covid – 19 ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯ ಏರಿಕೆಯನ್ನು ಗಮನಿಸಲಾಗಿದ್ದು, ದಿನಾಂಕ: 9.6.2022 ರಂದು 471 ಪ್ರಕರಣಗಳು ಹಾಗು ಪಾಸಿಟಿವ್ Positve Rate ಪ್ರಮಾಣ 2.14% ವರದಿಯಾಗಿದೆ. ಕೋವಿಡ್ 19 ನ ಮೂರನೇ ಅಲೆಯ ನಂತರದ ಅವಧಿಯ ಏರಿಕ ಇದಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು New Guidelines ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ.

Covid-19 New Guidelines:
1. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಉಲ್ಲೇಖ (3) ರ ಅನ್ವಯ ಕಡ್ಡಾಯಗೊಳಸಲಾಗಿದ್ದು, ಈ ಕ್ರಮವನ್ನು ಜಾರಿಗೊಳಸಲು ಮಾರ್ಷಲ್/ ಪೋಲೀಸ್ ಸಿಬ್ಬಂದಿಗಳ ಸಹಾಯವನ್ನು ಪಡೆಯುವುದು.

2. ಮುಚ್ಚಿದ ಸಂರಚನೆಯನ್ನು (Closed areas) ಹೊಂದಿದ ಸ್ಥಳಗಳಾದ ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕೆಫೆಟೇರಿಯಾ/ ಹೊಟೇಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಛೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲ ಸಿಬ್ಬಂದಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಹಾಗೂ ಮಾಸ್ಕ್ ಧರಿಸಿ ಬರುವರಿಗೆ ಮಾತ್ರವೇ ಪ್ರವೇಶ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಸಂಸ್ಥೆಯ ಮಾಲಕರ / ಆಡಳತಗಳ ಜವಾಬ್ದಾರಿಯಾಗಿರುತ್ತದೆ.

3. ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ( ಬಸ್ ಹಾಗೂ ರೈಲು ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.

4. ILI & SARI ಲಕ್ಷಣಗಳನ್ನು ಹೊಂದಿದವರು, ಹೈರಿಸ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.

5. ಅರ್ಹ ಜನರೆಲ್ಲರೂ Precautionary dose ಸೇರಿದಂತೆ, ಕೋವಿಡ್ 19 ಲಸಿಕೆಯನ್ನು ಪಡೆಯುವುದು. ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ಮೇಲೆ ತಿಳಿಸಿದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಸುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

Leave a Reply

Your email address will not be published. Required fields are marked *

error: Content is protected !!