ಪಡಿತರ ಹಮಾಲಿಗಳಿಂದ ಫೆ15ರಂದು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಧರಣಿ

ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಧರಣಿ
ದಾವಣಗೆರೆ : ಸೇವಾ ಭದ್ರತೆ, ಕೂಲಿ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಇದೇ ಫೆ.15ರಿಂದ ಹಮ್ಮಿಕೊಂಡಿರವುದಾಗಿ ಕರ್ನಾಟಕ ರಾಜ್ಯ ಲೋಡಿಂಗ್ ಅಂಡ್ ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟ ತಿಳಿಸಿದೆ
ಶುಕ್ವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಒಕ್ಕೂಟದ ರಾಜ್ಯಾಧ್ಯಕ್ಷ ವರದರಾಜೇಂದ್ರ, ಪಡಿತರವನ್ನು ಗೋದಾಮುಗಳಿಂದ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳಿಗೆ ಆಹಾರಧಾನ್ಯ ಎತ್ತುವಳಿ, ಲೋಡಿಂಗ್ ಅನ್‌ಲೋಡಿಂಗ್ ಕೆಲಸ ಮಾಡುತ್ತಿರುವ ಹಮಾಲಿ ಕಾರ್ಮಿಕರಿಗೆ ಹಲವಾರು ವರ್ಷಗಳಿಂದ ಕೂಲಿದರ ಹೆಚ್ಚಳ ಮಾಡಿಲ್ಲ ಎಂದು ಆರೋಪಿಸಿದರು.
ಕೂಲಿ ದರ ಹೆಚ್ಚಳ ಮಾಡಬೇಕು. ಗೋದಾಮುಗಳಲ್ಲಿ ನೀರು, ಶೌಚಾಲಯ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಆಹಾರ ಇಲಾಖೆಯಿಂದಲೇ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದರು.
ಸರ್ಕಾರ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಬರುವ ವಿಧಾನ ಚುನಾವಣೆಯನ್ನು ಬಹಿಷ್ಕರಿಸಲು ಕರೆ ನೀಡಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸತೀಶ್ ಅರವಿಂದ್, ಹಳದಪ್ಪ, ಅಕ್ಬರ್, ರಮೇಶ್, ಆದಿಲ್ ಖಾನ್ ಉಪಸ್ಥಿತರಿದ್ದರು.